|
| ಸಾಹಿತಿಗಳ ವಿರುದ್ಧ ಕುಮಾರಸ್ವಾಮಿ ಕಿಡಿ |
| ಬೆಂಗಳೂರು, 4 ಜುಲೈ 2008 ( 12:29 IST ) | |
ರಾಜ್ಯದಲ್ಲಿ ಸ್ಥಿತಿಗತಿಗಳ ಬಗ್ಗೆ ಕೇಂದ್ರಕ್ಕೆ ಅರಿವು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಾಹಿತಿಗಳು ದೆಹಲಿಗೆ ದೌಡಾಯಿಸುವ ಮೂಲಕ ಸಾಹಿತಿಗಳು ಜಾತಿ ರಾಜಕಾರಣಕ್ಕೆ ಒಳಗಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿಗಳ ಬಗ್ಗೆ ಗೌರವವಿದೆ. ಆದರೆ ಅವರು ಜಾತಿ ವ್ಯಾಮೋಹದಿಂದ ಹೊರಬರಬೇಕು ಹಾಗೂ ರಾಜಕಾರಣ ಮಾಡುವುದನ್ನು ಬಿಟ್ಟು ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.
ರೈತರು 10 ಎಚ್.ಪಿ. ತನಕ ನೀರಾವರಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವುದಾಗಿ ಬಿಜೆಪಿ ಚುನಾವಣೆಗೂ ಮೊದಲೇ ತಿಳಿಸಿತ್ತು. ಇದೀಗ ಈ ಘೋಷಣೆಯನ್ನು ತಕ್ಷಣವೇ ಜಾರಿಗೆ ತರಬೇಕೆಂದು ಆಗ್ರಹಿಸಿದ ಅವರು, 10 ಎಚ್.ಪಿ. ತನಕ ನೀರಾವರಿ ಪಂಪ್‌ಸೆಟ್ ಹೊಂದಿದ್ದ ರೈತರು ಬಿಲ್ ಪಾವತಿಮಾಡಬಾರದೆಂದು ಕರೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಮನಗರದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಸ್ಥಳಾಂತರ ಮಾಡಲು ಅವಕಾಶ ನೀಡುವುದಿಲ್ಲ. ಇದಕ್ಕೆ ಸರ್ಕಾರ ಪ್ರಯತ್ನಿಸಿದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|