|
| ಯಡಿಯೂರಪ್ಪ ಸುಳ್ಳುಗಾರ: ಬಂಗಾರಪ್ಪ ಆರೋಪ |
| ಶಿವಮೊಗ್ಗ, ಶುಕ್ರವಾರ, 4 ಜುಲೈ 2008 ( 13:19 IST ) | |
ಸಚಿವ ಸ್ಥಾನದಿಂದ ಪಕ್ಷೇತರರನ್ನು ಕಿತ್ತೊಗೆಯುವ ದಿನ ದೂರವಿಲ್ಲ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗೆ ಸ್ಪಂದಿಸದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಬ್ಬ ದೊಡ್ಡ ಸುಳ್ಳುಗಾರ ಎಂದು ಟೀಕಿಸಿದ್ದಾರೆ.
ರೈತರ ಮತಕ್ಕಾಗಿ ಪ್ರಣಾಳಿಕೆ ರೈತಪರ ಯೋಜನೆಗಳನ್ನು ಪ್ರಕಟಿಸಿದ ಬಿಜೆಪಿ, ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ. ರಸಗೊಬ್ಬರ, ಬಿತ್ತನೆ ಬೀಜ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ರೈತರನ್ನು ಕಾಡಿದೆ. ಇವೆಲ್ಲವುದಕ್ಕೂ ಪರಿಹಾರ ಕಂಡುಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೆ, ರಾಜ್ಯದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಸರ್ಕಾರ ತಿಂಗಳು ಕಳೆದರೂ ರೈತರಿಗೆ ಉಚಿತ ವಿದ್ಯುತ್ ನೀಡಿಲ್ಲ. ಬದಲಾಗಿ ಬಿಜೆಪಿ ನಾಯಕರು ಹೋಮ ಹವನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ದೂರಿದರು.
ಈ ನಡುವೆ ರಾಜ್ಯಗಳ ಸಮಸ್ಯೆ ಬಗ್ಗೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಿರುವುದು ಹಾಸ್ಯಾಸ್ಪದವಾಗಿದೆ. ಇದೊಂದು ಕಟ್ಟುಕತೆ ಎಂದು ಅವರು ಟೀಕಿಸಿದ್ದಾರೆ. ಇದೇ ವೇಳೆ ಶಿಕಾರಿಪುರದಲ್ಲಿ ತಮ್ಮ ಸೋಲಿಗೆ ಬಿಜೆಪಿ ಹರಿಸಿದ ಹಣದ ಹೊಳೆಯೇ ಕಾರಣ ಎಂದು ಮತ್ತೊಮ್ಮೆ ಆರೋಪಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|