|
| ಅತುಲ್ ರಾವ್ ಮಂಗಳೂರು ಜೈಲಿಗೆ ಸ್ಥಳಾಂತರ |
| ಮಂಗಳೂರು, ಶುಕ್ರವಾರ, 4 ಜುಲೈ 2008 ( 18:21 IST ) | |
ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಅತುಲ್ ರಾವ್‌ರನ್ನು ಮಂಗಳೂರು ಜೈಲಿಗೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಇಂದು(ಶುಕ್ರವಾರ) ಉಡುಪಿಯ ಸಿಜೆಎಂ ನ್ಯಾಯಾಲಯ ವಿಚಾರಣೆ ವೇಳೆ ಈ ಆದೇಶ ಹೊರಡಿಸಿದೆ. ಭದ್ರತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಆರೋಪಿಯನ್ನು ಮಂಗಳೂರಿಗೆ ಸ್ಥಳಾಂತರಿಸಬೇಕೆಂದು ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.
ಅಲ್ಲದೆ, ಆರೋಪಿ ಬಯಸಿದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಸುವುದಕ್ಕೆ ನ್ಯಾಯಾಲಯದ ಅಡ್ಡಿಯಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಅತುಲ್ ಪತ್ನಿ ಮೀರಾ ರಾವ್ ಬುಧವಾರ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತಮ್ಮ ಪತಿಗೆ ಉಡುಪಿ ಜೈಲಿನಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದಿರುವುದರಿಂದ ಬೇರೆ ಜಿಲ್ಲೆಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ.
ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಈ ಆದೇಶವನ್ನು ನೀಡಿದೆ. ಅಲ್ಲದೆ, ಅತುಲ್ ತಾಯಿ ಉಷಾ ರಾವ್ ಕೂಡ ತಮ್ಮ ಮಗನಿಗೆ ಉತ್ತಮ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಜೈಲಿನ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಈ ನಡುವೆ ಇತ್ತೀಚೆಗಷ್ಟೇ ಜೈಲಿನಲ್ಲಿ ಕೈದಿಗಳು ಆಹಾರದ ವಿಚಾರದಲ್ಲಿ ಅತುಲ್ ವಿರುದ್ಧ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|