|
| ಬಿಜೆಪಿಯಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ |
| ಬೆಂಗಳೂರು, ಶುಕ್ರವಾರ, 4 ಜುಲೈ 2008 ( 18:54 IST ) | |
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.ನಗರದಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆ ಯಾವುದೇ ಸಂದರ್ಭದಲ್ಲಿಯೂ ಚುನಾವಣೆ ನಡೆಸಿದರೂ ಪಕ್ಷ ಎದುರಿಸಲು ಸಿದ್ದವಾಗಿದ್ದು, ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಿದೆ ಎಂದು ತಿಳಿಸಿದ್ದಾರೆ.
ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಸಾಹಿತಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಉದ್ಯಮದವರ ಸಲಹೆ ಸೂಚನೆಗಳನ್ನು ಪಡೆದುಕೊಂಡ ಬಳಿಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿರೋಧ ಪಕ್ಷಗಳ ಮೇಲೆ ಹರಿಹಾಯ್ದ ಅವರು, ರಾಜ್ಯದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರದ ಬಳಿ ಕರೆದೊಯ್ದಿದ್ದ ನಿಯೋಗದ ಜೊತೆ ಪಾಲ್ಗೊಳ್ಳದೆ ಸಣ್ಣತನದ ರಾಜಕಾರಣ ಮಾಡಿದ್ದಾರೆ ಎಂದು ಆರೋಪಿಸಿದರು.
ವಿರೋಧ ಪಕ್ಷಗಳ ಇಂತಹ ನಿಲುವು ತಮಗೆ ಬೇಸರ ತಂದಿದೆ ಎಂದ ಅವರು, ತಾವು ವಿರೋಧ ಪಕ್ಷದಲ್ಲಿದ್ದಾಗ ಇಂತಹ ಸಣ್ಣತನದ ರಾಜಕಾರಣ ಮಾಡಿರಲಿಲ್ಲ ಎಂದು ತಿಳಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|