ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ತನಿಖೆಯಾದರೆ ಗೌಡರ ಕುಟುಂಬ ಜೈಲಿಗೆ: ರೆಡ್ಡಿ
ಬಳ್ಳಾರಿ/ಬೆಂಗಳೂರು, ಶನಿವಾರ, 5 ಜುಲೈ 2008   ( 16:23 IST )
ಬಳ್ಳಾರಿ ಗಣಿ ಲಂಚ ಪ್ರಕರಣ ಈಗ ಮತ್ತೆ ಸದ್ದು ಮಾಡಿದೆ. ಗಣಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಿ ಎಂದು ಇತ್ತೀಚೆಗಷ್ಟೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಇಂದು(ಶನಿವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಮುಖ್ಯಮಂತ್ರಿಯಾಗಿದ್ದಾಗ ಗಣಿ ಲಂಚ ಹಗರಣದ ಕುರಿತು ತನಿಖೆ ನಡೆಸಲು ಹಿಂಜರಿದ ಕುಮಾರಸ್ವಾಮಿ ಅವರಿಗೆ ಆ ಸಂದರ್ಭದಲ್ಲಿ ಹಗರಣದ ಕುರಿತು ಭಯ ಆವರಿಸಿತ್ತು. ಆದರೆ ಈಗ ಏಕಾಏಕಿ ತನಿಖೆಗೆ ಒತ್ತಾಯಿಸಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಈ ಹಗರಣದ ಕುರಿತು ಸತ್ಯಾಂಶ ಬೇಕಿದ್ದರೆ ಅವರು ಅಧಿಕಾರದಲ್ಲಿದ್ದಾಗಲೇ ಮಾಡಬೇಕಿತ್ತು. ಒಂದು ವೇಳೆ ಈಗ ಲಂಚ ಹಗರಣದ ಕುರಿತು ಸಮಗ್ರ ತನಿಖೆ ನಡೆಸಿದರೆ, ಗೌಡರ ಕುಟುಂಬ ಜೈಲಿಗೆ ಹೋಗುವುದರಲ್ಲಿ ಅನುಮಾನವಿಲ್ಲ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಇದೇ ಸಂದರ್ಭದಲ್ಲಿ ರೆಡ್ಡಿ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ಸರ್ಕಾರ ಬಿಜೆಪಿ ಕೈಯಲ್ಲಿದೆ. ಅಲ್ಲದೆ, ಮೂರು ಬಳ್ಳಾರಿ ಶಾಸಕರು ಸಚಿವರಾಗಿದ್ದಾರೆ. ಈ ನಿಟ್ಟಿನಲ್ಲಿ ಗಣಿ ಲಂಚ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗಲೇ ನಡೆಸಿರುವ ವರದಿ ಈಗಾಗಲೇ ರಾಜ್ಯಪಾಲರ ಬಳಿ ಇದೆ. ಆದರೆ ಹೊಸ ಸರ್ಕಾರ ಬಂದ ಬಳಿಕ ಅದು ಮೂಲೆಗುಂಪಾಗಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದ ಅವರು, ಸದನದಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಲಾಗುವುದು ಎಂದಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗುಲ್ಬರ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಆರಂಭ
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಯಡಿಯೂರಪ್ಪ
ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ದೇವೇಗೌಡ ಕರೆ
ಪೆಟ್ರೋಲ್ ಕೊರತೆ ಇಲ್ಲ: ಹರತಾಳ್ ಹಾಲಪ್ಪ
ರಾಜ್ಯದ ಸಮಸ್ಯೆ: ದೆಹಲಿಗೆ ಕಾಂಗ್ರೆಸ್ ನಿಯೋಗ
ಬಿಜೆಪಿಯಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ
ಗ್ರಹ ಗತಿ
ದೈನಿಕ - ಮ್ಮ ಸಾಮರ್ಥ್ಯದ ಬಗ್ಗೆ ಇಂದು ನೀವು ಹೆಚ್ಚು ಭರವಸೆಯಿಂದಿರುತ್ತೀರಿ.ಮುಖ್ಯ ಕೆಲಸವೊಂದರ ಪ್ರಯತ್ನದಲ್ಲಿ ನಿಮಗೆ ಹೆತ್ತವರ ನೆರವು ದೊರೆಯಲಿದೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮತ್ತು ನಿಮಗೆ ಮಾನಸಿಕ ನಿರಾಳತೆ ನೀಡುತ್ತವೆ. ಮಿತ್ರರ ಸಹಕಾರವೂ ದೊರೆಯಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಾಹಿತಿಗಳ ವಿರುದ್ಧ ಕುಮಾರಸ್ವಾಮಿ ಕಿಡಿ
ರಾಜ್ಯದಲ್ಲಿ ಸ್ಥಿತಿಗತಿಗಳ ಬಗ್ಗೆ ಕೇಂದ್ರಕ್ಕೆ ಅರಿವು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ....
ರಾಜ್ಯದ ಸಮಸ್ಯೆ: ದೆಹಲಿಗೆ ಕಾಂಗ್ರೆಸ್ ನಿಯೋಗ
ಪೆಟ್ರೋಲ್ ಕೊರತೆ ಇಲ್ಲ: ಹರತಾಳ್ ಹಾಲಪ್ಪ
ಮನರಂಜನೆ
ಚಿತ್ರ ಸುದ್ದಿ - ಪೈರಸಿ ಮಾಡುವವರನ್ನು ವಿರುದ್ಧ ಗೂಂಡಾ ಕಾಯ್ದೆ ಅಡಿ ಬಂಧಿಸಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಾಣಿಜ್ಯ ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ಮುಂದೆ ಓದಿ|ಮತ್ತಷ್ಟು...