ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕಮಲದಳಕ್ಕೆ ಸಿಂಧ್ಯಾ ಸೇರ್ಪಡೆ?
ಬೆಂಗಳೂರು, 5 ಜುಲೈ 2008   ( 18:30 IST )
nrb
ಇತ್ತೀಚೆಗಷ್ಟೇ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರುವ ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಎಲ್ಲರಿಗೂ ಕುತೂಹಲ ಮೂಡಿತ್ತು. ಇಂತಹ ಪ್ರಭಾವಿ ನಾಯಕನನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ.

ಉನ್ನತ ಮೂಲಗಳ ಪ್ರಕಾರ, ಸಿಂಧ್ಯಾ ಬಿಜೆಪಿಯತ್ತ ಹೆಚ್ಚಿನ ಒಲವು ತೋರಿದ್ದಾರೆ ಎನ್ನಲಾಗಿದೆ. ಹಲವಾರು ಘಟಾನುಘಟಿಗಳನ್ನು ತಮ್ಮತ್ತ ಸೆಳೆದುಕೊಂಡಿರುವ ಕಮಲಕ್ಕೆ ಮತ್ತೊಂದು ದಳ ಸಧ್ಯದಲ್ಲಿಯೇ ಸೇರಲಿದೆ ಎನ್ನುವುದು ಬಿಜೆಪಿ ನಾಯಕರ ಒಳಗಿನ ಮಾತು.

ಈಗಾಗಲೇ ಬಿಜೆಪಿಯ ಹಿರಿಯ ನಾಯಕರು ಸಿಂಧ್ಯಾ ಅವರನ್ನು ಭೇಟಿ ಮಾಡಿ ಸಂಪರ್ಕಿಸಿದಾಗ ಸಿಂಧ್ಯಾ ತಮ್ಮ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಹಿಂದುಳಿದ ವರ್ಗದ ನಾಯಕರ ಪಡೆಯನ್ನು ಗಟ್ಟಿಗೊಳಿಸಲು ಬಿಜೆಪಿ ಸನ್ನದ್ಧವಾಗಿದೆ. ಅಲ್ಲದೆ, ಮುಂಬೈ-ಕರ್ನಾಟಕ ಭಾಗದಲ್ಲಿನ ಮರಾಠ ಮತಬ್ಯಾಂಕ್ ಮೇಲೆ ಪ್ರಭಾವ ಬೀರಬಹುದೆಂಬುದು ಬಿಜೆಪಿ ಲೆಕ್ಕಚಾರ.

ಈ ನಡುವೆ ಕಾಂಗ್ರೆಸ್ ನಾಯಕರು ಸಿಂಧ್ಯಾ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರಾದರೂ, ಸಿಂಧ್ಯಾ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದಾರೆ. ಪ್ರಭಾವಿ ನಾಯಕ ಸಿದ್ದರಾಮಯ್ಯನವರಿಗೇ ಕಾಂಗ್ರೆಸ್ ಕಡೆಗೆಣಿಸಿದೆ ಎಂಬುದು ಸಿಂಧ್ಯಾ ಅಂಬೋಣ. ಬಿಜೆಪಿ ಈಗಾಗಲೇ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವುದರಿಂದ ಸಿಂಧ್ಯಾ ಅವರನ್ನು ಕನಕಪುರ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮಾತುಕತೆ ಪ್ರಗತಿಯಲ್ಲಿದ್ದು, ಒಂದುವಾರದೊಳಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚುನಾವಣೆಗೆ ಸಜ್ಜುಗೊಳ್ಳಲು ವೆಂಕಯ್ಯ ನಾಯ್ಡು ಕರೆ
ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ
ಶಂಕಿತ ಎಲ್‌ಟಿಟಿಇ ಸದಸ್ಯನ ಬಂಧನ
ನವೋದಯ ಶಾಲೆಗಳಲ್ಲಿ ಸಿಇಟಿ ನಡೆಸದಂತೆ ಒತ್ತಾಯ
ಬೆಂಗಳೂರಿಗೆ ಕಾಲಿಡಲಿರುವ ವೈನ್ ಮತ್ತು ಡೈನ್
ಹೈಕೋರ್ಟ್ ತೀರ್ಪು ಖಂಡಿಸಿ ಕರವೇ ಪ್ರತಿಭಟನೆ
ಗ್ರಹ ಗತಿ
ದೈನಿಕ - ಮ್ಮ ಸಾಮರ್ಥ್ಯದ ಬಗ್ಗೆ ಇಂದು ನೀವು ಹೆಚ್ಚು ಭರವಸೆಯಿಂದಿರುತ್ತೀರಿ.ಮುಖ್ಯ ಕೆಲಸವೊಂದರ ಪ್ರಯತ್ನದಲ್ಲಿ ನಿಮಗೆ ಹೆತ್ತವರ ನೆರವು ದೊರೆಯಲಿದೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮತ್ತು ನಿಮಗೆ ಮಾನಸಿಕ ನಿರಾಳತೆ ನೀಡುತ್ತವೆ. ಮಿತ್ರರ ಸಹಕಾರವೂ ದೊರೆಯಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಾಹಿತಿಗಳ ವಿರುದ್ಧ ಕುಮಾರಸ್ವಾಮಿ ಕಿಡಿ
ರಾಜ್ಯದಲ್ಲಿ ಸ್ಥಿತಿಗತಿಗಳ ಬಗ್ಗೆ ಕೇಂದ್ರಕ್ಕೆ ಅರಿವು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ....
ರಾಜ್ಯದ ಸಮಸ್ಯೆ: ದೆಹಲಿಗೆ ಕಾಂಗ್ರೆಸ್ ನಿಯೋಗ
ಪೆಟ್ರೋಲ್ ಕೊರತೆ ಇಲ್ಲ: ಹರತಾಳ್ ಹಾಲಪ್ಪ
ಮನರಂಜನೆ
ಚಿತ್ರ ಸುದ್ದಿ - ಪೈರಸಿ ಮಾಡುವವರನ್ನು ವಿರುದ್ಧ ಗೂಂಡಾ ಕಾಯ್ದೆ ಅಡಿ ಬಂಧಿಸಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಾಣಿಜ್ಯ ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ಮುಂದೆ ಓದಿ|ಮತ್ತಷ್ಟು...