|
| ರಾಜೀವ್ ಗಾಂಧಿ ವಿವಿ ರಾಮನಗರದಿಂದ ಬಳ್ಳಾರಿಗೆ? |
| ಬಳ್ಳಾರಿ, ಸೋಮವಾರ, 7 ಜುಲೈ 2008 ( 12:54 IST ) | |
ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಬೇರೆಡೆಗೆ ವರ್ಗಾಯಿಸುವ ಸಂಚು ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ ಬೆನ್ನಲ್ಲೆ, ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಬಳ್ಳಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ಹಿಂದೆ ಬಳ್ಳಾರಿಯಲ್ಲಿ ರಾಜೀವ್ ಗಾಂಧಿ ವಿವಿ ಆರಂಭಿಸಬೇಕೆಂಬ ಪ್ರಸ್ತಾಪ ಇತ್ತು. ಆದರೆ ಈಗ ಅದನ್ನು ರಾಮನಗರಕ್ಕೆ ಸ್ಥಳಾಂತರಿಸಲು ಉದ್ದೇಶಿಸಿರುವ ವಿವಿಯನ್ನು ಬಳ್ಳಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.
ಈ ಕಾರ್ಯಕ್ಕೆ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಅವರ ನೇತೃತ್ವದಲ್ಲಿ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯಲ್ಲಿ ಗುಜರಾತ್ ಸೇರಿದಂತೆ ಇತರ ರಾಜ್ಯಗಳು ಜಾರಿಗೆ ತಂದಿರುವ ಯೋಜನೆಗಳನ್ನು ರಾಜ್ಯದಲ್ಲೂ ಜಾರಿಗೆ ತರುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಉತ್ತರಕರ್ನಾಟಕ ಹಾಗೂ ಬಳ್ಳಾರಿಯ ಅಭಿವೃದ್ದಿಗೆ ಸಂಬಂಧಿಸಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಿ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು? |
| |
|
|
|
|
|
|
|