ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಂಚನೆ ಪ್ರಕರಣ: ಶಾಸಕರಿಬ್ಬರ ಮೇಲೆ ಸಿಬಿಐ ತೂಗುಕತ್ತಿ
ಬೆಂಗಳೂರು, ಸೋಮವಾರ, 7 ಜುಲೈ 2008   ( 13:29 IST )
ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಸರ್ಕಾರದ ಭದ್ರತೆಗಾಗಿ ಪ್ರತಿಪಕ್ಷದ ನಾಯಕರನ್ನು ಸೆಳೆಯಲು ಯತ್ನಿಸುತ್ತಿರುವಂತೆ ಇತ್ತ ಬಿಜೆಪಿ ಶಾಸಕರಿಬ್ಬರು ಸ್ಟೇ'ಟ್ ಬ್ಯಾಂಕ್ ಹಗರಣವೊಂದರಲ್ಲಿ ಭಾಗಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಹಿರಿಯೂರು ಕ್ಷೇತ್ರದ ಪಕ್ಷೇತರ ಶಾಸಕ ಡಿ. ಸುಧಾಕರ್ ಹಾಗೂ ವಸತಿ-ಮುಜರಾಯಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ಗೃಹ ಸಾಲ ಪಡೆಯಲು ಗ್ರಾಹಕರು ನಕಲಿ ವೇತನ ಪ್ರಮಾಣಪತ್ರ ಸಲ್ಲಿಸಿ ವಂಚಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಿಬಿಐ ತನಿಖೆಯಿಂದ ಬಹಿರಂಗಗೊಂಡಿದೆ.

ಈ ಇಬ್ಬರು ಶಾಸಕರು ನಡೆಸುತ್ತಿರುವ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ನಿವೇಶನ ಹಾಗೂ ಮನೆ ಖರೀದಿಸಿದ ಗ್ರಾಹಕರು, ಸ್ಟೇಟ್ ಬ್ಯಾಂಕಿನಲ್ಲಿ ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಲು ಪರೋಕ್ಷವಾಗಿ ಸಹಕಾರ ನೀಡಿದ್ದಾರೆ. ಈ ಮೂಲಕ ಬ್ಯಾಂಕಿನಿಂದ ಹೆಚ್ಚಿನ ಸಾಲ ಮಂಜೂರು ಮಾಡಿಸಿಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಇಬ್ಬರು ಶಾಸಕರ ವಿರುದ್ಧ ಶೀಘ್ರವೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿರುವ ಸಿಬಿಐ, ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣದ ದಾಖಲಿಸುವಂತೆ ಎಸ್‌ಬಿಎಂಗೆ ಸೂಚನೆ ನೀಡಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ರಾಜೀವ್ ಗಾಂಧಿ ವಿವಿ ರಾಮನಗರದಿಂದ ಬಳ್ಳಾರಿಗೆ?
ಸಿಲಿಂಡರ್ ಸ್ಫೋಟಕ್ಕೆ ಇಬ್ಬರ ಬಾಲಕರ ಸಾವು
ಬಿಜೆಪಿ ಗಾಳ: ನಾಲ್ವರು ಶಾಸಕರು ಕಮಲದಳಕ್ಕೆ
ಹೋದರೆ ಹೋಗಲಿ: ದೇವೇಗೌಡರ ಪ್ರತಿಕ್ರಿಯೆ
ಪಕ್ಷ ಒಡೆಯುವ ಕೆಲಸ ಮಾಡಿಲ್ಲ: ಯಡಿಯೂರಪ್ಪ ಸ್ಪಷ್ಟನೆ
ಗ್ರಹ ಗತಿ
ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಮಲದಳಕ್ಕೆ ಸಿಂಧ್ಯಾ ಸೇರ್ಪಡೆ?
ಇತ್ತೀಚೆಗಷ್ಟೇ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರುವ ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ..
ಚುನಾವಣೆಗೆ ಸಜ್ಜುಗೊಳ್ಳಲು ವೆಂಕಯ್ಯ ನಾಯ್ಡು ಕರೆ
ತನಿಖೆಯಾದರೆ ಗೌಡರ ಕುಟುಂಬ ಜೈಲಿಗೆ: ರೆಡ್ಡಿ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು?
ಮುಂದೆ ಓದಿ|ಮತ್ತಷ್ಟು...