|
| ಐದು ವರ್ಷಗಳಲ್ಲಿ ವಿದ್ಯುತ್ ಕೊರತೆ ನೀಗಿಸಲು ಕರೆ |
| ಬೆಂಗಳೂರು, 7 ಜುಲೈ 2008 ( 16:58 IST ) | |
ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಬೇಕೆಂದು ಇಂಧನಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಭಾನುವಾರ ಇಂಜಿನಿಯರ್‌ಗಳಿಗೆ ಸಲಹೆ ನೀಡಿದ್ದಾರೆ. ಕರ್ನಾಟಕ ವಿದ್ಯುತ್ ಮಂಡಳಿ ಎಂಜಿನಿಯರ್‌ಗಳ ಸಂಘದ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಖಾತರಿಗೆ ಯೋಜನೆ ರೂಪಿಸುವಂತೆ ಅವರು ಕರೆ ನೀಡಿದರು.
ಕರ್ನಾಟಕವು ವಿದ್ಯುತ್ ಅಗತ್ಯಗಳಿಗಾಗಿ ಇತರೆ ಕ್ಷೇತ್ರಗಳ ಮೇಲೆ ಅವಲಂಬಿತವಾಗಿರುವುದನ್ನು ನಿಲ್ಲಿಸಬೇಕು. ಬದಲಾಗಿ ವಿದ್ಯುತ್ ಕ್ಷೇತ್ರದಲ್ಲಿ ಉಳಿದವರಿಗೆ ಮಾದರಿಯಾಗಿರಬೇಕು ಎಂದು ಅವರು ನುಡಿದರು. ರೈತರು, ಮನೆಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ದಿನಕ್ಕೆ 24 ಗಂಟೆಗಳು ಸತತವಾಗಿ ವಿದ್ಯುತ್ ಪೂರೈಕೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಕರ್ನಾಟಕ ವಿದ್ಯುತ್ ನಿಗಮದ ನಿವೃತ್ತ ನೌಕರರಿಗೆ ವೈದ್ಯಕೀಯ ನೆರವು ಟ್ರಸ್ಟ್ ರಚಿಸುವಂತೆ ಕೆಇಬಿಇಎ ಅಧ್ಯಕ್ಷ ಸತ್ಯಪ್ರೇಮ ಕುಮಾರ್ ಸಚಿವರಿಗೆ ಒತ್ತಾಯಿಸಿದರು. 2003ರಲ್ಲಿ ನೇಮಕವಾದ ಸಹಾಯಕ ಇಂಜಿನಿಯರ್ ಮತ್ತು ಪ್ರೊಬೇಷನರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳ ಸೇವೆಗಳನ್ನು ಕಾಯಂ ಮಾಡುವಂತೆ ಕುಮಾರ್ ಈಶ್ವರಪ್ಪ ಅವರಲ್ಲಿ ಮನವಿ ಮಾಡಿಕೊಂಡರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|