|
| ಸಿದ್ದರಾಮಯ್ಯ ನಿವಾಸಕ್ಕೆ ಕೇಂದ್ರ ಸಚಿವರು |
| ಬೆಂಗಳೂರು, ಸೋಮವಾರ, 7 ಜುಲೈ 2008 ( 17:03 IST ) | |
ಕಳೆದ ಎರಡು ದಿನಗಳಿಂದ ರಾಜ್ಯ ರಾಜಕೀಯದಲ್ಲಾಗಿರುವ ಬದಲಾವಣೆಯಿಂದ ಕಾಂಗ್ರೆಸ್ ಆತಂಕಗೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂತೋಷ್ ಕುಮಾರ್ ಬಗಾಡಿಯಾ ಇಂದು(ಸೋಮವಾರ) ದಿಢೀರ್ ನಗರಕ್ಕೆ ಆಗಮಿಸಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಕೇಂದ್ರ ಸಚಿವರು ಸುದೀರ್ಘ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಪ್ರಸ್ತುತ ರಾಜಕೀಯದ ಕುರಿತು ಅವರೊಂದಿಗೆ ಚರ್ಚೆ ಮಾಡುವ ನಿಟ್ಟಿನಲ್ಲಿ ಭೇಟಿ ಮಾಡಿದ್ದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾನು ಬಿಜೆಪಿ ಸೇರುತ್ತೇನೆ ಎಂಬುದು ಗಾಳಿಸುದ್ದಿ. ಇದುವರೆಗೆ ಯಾವ ಬಿಜೆಪಿ ನಾಯಕರು ತಮ್ಮನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನಗೊಂಡಿದ್ದ ಸಿದ್ದರಾಮಯ್ಯ, ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಿರಲಿಲ್ಲ. ಅಲ್ಲದೆ, ದೆಹಲಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗಕ್ಕೆ ಬಹಿಷ್ಕಾರ ಹಾಕಿದ್ದರು. ಈ ಎಲ್ಲಾ ಬೆಳವಣಿಗೆಯನ್ನು ಹೈಕಮಾಂಡ್ ಗಮನಕ್ಕೆ ತರಲಾದ ಹಿನ್ನೆಲೆಯಲ್ಲಿ ಇಂದು ನಗರಕ್ಕಾಗಮಿಸಿದ ಕೇಂದ್ರ ಸಚಿವರು ಹಲವು ಮುಖಂಡರು ಭೇಟಿ ಮಾಡಿ ಚರ್ಚೆ ನಡೆಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು? |
| |
|
|
|
|
|
|
|