ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬೆಂಗಳೂರು, ಸೋಮವಾರ, 7 ಜುಲೈ 2008   ( 19:30 IST )
ರಾಜ್ಯದಲ್ಲಿ ಕನ್ನಡ ಚಿತ್ರಗಳಲ್ಲಿ ಕಂಡು ಬಂದಿರುವ ಪೈರಸಿ ಹಾವಳಿ ತಡೆ ಒಡ್ಡುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ಇಂದು(ಸೋಮವಾರ) ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದಲ್ಲಿನ ಸಮಿತಿ ಜಂಟಿ ಪೊಲೀಸ್ ಆಯುಕ್ತ ಗೋಪಾಲ್ ಹೊಸೂರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತರು, ಪೈರಸಿ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ತಪ್ಪಿತಸ್ಥರಿಗೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಮಾತನಾಡಿದ ಮಂಡಳಿ ಅಧ್ಯಕ್ಷೆ ಜಯಮಾಲ, ಕನ್ನಡ ಚಿತ್ರರಂಗದ ಮೌಲ್ಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಕ್ಕಿಂತಲೂ ಪೊಲೀಸ್ ಇಲಾಖೆಯ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ರಾಕ್ಲೈನ್ ವೆಂಕಟೇಶ್, ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಸೇರಿದಂತೆ ಮಂಡಳಿಯ ಹಲವು ಸದಸ್ಯರು ಉಪಸ್ಥಿತರಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸಿದ್ದರಾಮಯ್ಯ ನಿವಾಸಕ್ಕೆ ಕೇಂದ್ರ ಸಚಿವರು
ಐದು ವರ್ಷಗಳಲ್ಲಿ ವಿದ್ಯುತ್ ಕೊರತೆ ನೀಗಿಸಲು ಕರೆ
ಪ್ರಾಥಮಿಕ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ
ವಂಚನೆ ಪ್ರಕರಣ: ಶಾಸಕರಿಬ್ಬರ ಮೇಲೆ ಸಿಬಿಐ ತೂಗುಕತ್ತಿ
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ರಾಜೀವ್ ಗಾಂಧಿ ವಿವಿ ರಾಮನಗರದಿಂದ ಬಳ್ಳಾರಿಗೆ?
ಗ್ರಹ ಗತಿ
ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಮಲದಳಕ್ಕೆ ಸಿಂಧ್ಯಾ ಸೇರ್ಪಡೆ?
ಇತ್ತೀಚೆಗಷ್ಟೇ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರುವ ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ..
ಚುನಾವಣೆಗೆ ಸಜ್ಜುಗೊಳ್ಳಲು ವೆಂಕಯ್ಯ ನಾಯ್ಡು ಕರೆ
ತನಿಖೆಯಾದರೆ ಗೌಡರ ಕುಟುಂಬ ಜೈಲಿಗೆ: ರೆಡ್ಡಿ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು?
ಮುಂದೆ ಓದಿ|ಮತ್ತಷ್ಟು...