|
| ಪಕ್ಷಾಂತರಿಗಳನ್ನು ಸೋಲಿಸುವುದೇ ಗುರಿ: ಗುಡುಗಿದ ಗೌಡ |
| ಬೆಂಗಳೂರು, ಸೋಮವಾರ, 7 ಜುಲೈ 2008 ( 19:40 IST ) | |
ರಾಜ್ಯ ರಾಜಕೀಯದಲ್ಲಿ ಅಲ್ಲೋಕಲ್ಲೋಲ ಸೃಷ್ಟಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಮತ್ತು ಪಕ್ಷಾಂತರದ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ಭೂಮಾಫಿಯಾ, ಗಣಿ ಲಾಭಿ ರಾಜ್ಯ ರಾಜಕೀಯವನ್ನು ದಿಕ್ಕುಗೆಡಿಸಿದೆ. ನಾನು ಇದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ದೇವೇಗೌಡ ಗುಡುಗಿದ್ದಾರೆ.
ರಾಜ್ಯ ರಾಜಕೀಯವನ್ನು ಹಣಬಲದಿಂದ ಕೈಗೊಂಬೆಯಂತೆ ಕುಣಿಸಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಹಣದ ಆಟಕ್ಕೆ ಇತಿಶ್ರೀ ಹಾಡಬೇಕು. ರಾಜೀನಾಮೆ ನೀಡಿರುವ ಶಾಸಕರು ಹಣಕ್ಕಾಗಿ ಬಿಕರಿಯಾಗಿದ್ದಾರೆ. ಜನ ಅವರಿಗೆ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ.
ರಾಜೀನಾಮೆ ನೀಡಿ ಉಪಚುನಾವಣೆಯಿಂದ ಸ್ಪರ್ಧಿಸುವುದೇ ನನ್ನ ಮುಂದಿರುವ ಮೊದಲ ಗುರಿ. ಅದಕ್ಕಾಗಿ ಜಾತ್ಯತೀತ ಪಕ್ಷಗಳು ಒಂದುಗೂಡಿ ಸರ್ವಸಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಅವಶ್ಯಕತೆ ಇದೆ ಎಂಬ ಅಭಿಪ್ರಾಯವನ್ನು ಗೌಡ ವ್ಯಕ್ತಪಡಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು? |
| |
|
|
|
|
|
|
|