|
| ವಿವಿ ಸ್ಥಳಾಂತರ: ರಾಮನಗರ ಬಂದ್‌ಗೆ ನಿರ್ಧಾರ |
| ರಾಮನಗರ, ಸೋಮವಾರ, 7 ಜುಲೈ 2008 ( 19:42 IST ) | |
ರಾಮನಗರದಲ್ಲಿ ಸ್ಥಾಪನೆಯಾಗಬೇಕಿದ್ದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಬಳ್ಳಾರಿಗೆ ಸ್ಥಳಾಂತರಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕುಮಾರಸ್ವಾಮಿ ನೇತೃತ್ವದಲ್ಲಿ ಅಸ್ತಿತ್ವದಲ್ಲಿದ್ದ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರ ರಾಮನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಆರೋಗ್ಯ ವಿವಿಯನ್ನು ಸ್ಥಳಾಂತರಿಸುವ ನಿರ್ಧಾರ ರಾಜಕೀಯ ಹುನ್ನಾರದಿಂದ ಕೂಡಿದೆ. ಈಗಾಗಲೇ ನೂರಾರು ಕೋಟಿ ಹಣ ಬಿಡುಗಡೆಯಾಗಿ ಕಾಮಗಾರಿ ಪ್ರಾರಂಭವಾಗಿರುವಾಗ ವಿವಿಯನ್ನು ಸ್ಥಳಾಂತರಿಸುವುದು ದುರುದ್ದೇಶದ ಪರಮಾವಧಿ ಎಂದು ರಾಮನಗರದಲ್ಲಿ ನಡೆದ ಹೋರಾಟ ಸಮಿತಿ ಕಿಡಿಯಾಡಿದೆ.
ಸಭೆಯಲ್ಲಿ ಜಿಲ್ಲಾ ಪತ್ರಕರ್ತ ಸಮೂಹ, ವೀರಶೈವ ಸಂಘಟನೆ ಮುಖಂಡರು, ಕನ್ನಡ ಸಾಹಿತ್ಯ ಪರಿಷತ್, ಲಯನ್ಸ್ ಸಂಸ್ಥೆ, ಅಲ್ಪಸಂಖ್ಯಾತ ಸಂಘಟನೆಗಳ ಸದಸ್ಯರು, ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.
ಮಾಗಡಿ ಶಾಸಕ ಬಾಲಕೃಷ್ಣ ಕಿಡಿ: ವಿವಿ ಸ್ಥಳಾಂತರಕ್ಕೆ ನಡೆಯುತ್ತಿರುವ ಸಂಚಿನ ಕುರಿತು ಪ್ರತಿಕ್ರಿಯಿಸಿರುವ ಮಾಗಡಿ ಶಾಸಕ ಬಾಲಕೃಷ್ಣ, ವಿವಿ ಸ್ಥಳಾಂತರ ಸರಿಯಲ್ಲ ಎಂದಿದ್ದಾರೆ. ಸ್ಥಳೀಯರ ಭಾವನೆಗಳ ವಿರುದ್ಧ ತೆಗೆದುಕೊಳ್ಳುವ ನಿರ್ಧಾರ ಒಳ್ಳೆಯದಲ್ಲ. ಪ್ರಾಣಕೊಟ್ಟರೂ ವಿವಿ ಸ್ಥಳಾಂತರಕ್ಕೆ ಅವಕಾಶ ಕೊಡುವುದಿಲ್ಲ. ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಬಾಲಕೃಷ್ಣ ಕಿಡಿಕಾರಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು? |
| |
|
|
|
|
|
|
|