ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕಾಂಗ್ರೆಸ್‌ಗೆ ಬಿಸಿಮುಟ್ಟಿಸಿದ ದೇವೇಗೌಡರ ಷರತ್ತು
ಬೆಂಗಳೂರು, 12 ಜುಲೈ 2008   ( 12:58 IST )
ರಾಜ್ಯದಲ್ಲಿ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲಿ ಒಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಒಪ್ಪಿದರೆ ಮಾತ್ರ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ನೀಡಿ ಮಾತುಕತೆ ನಡೆಸಿದ ಅವರು ಒಮ್ಮತದ ಅಭ್ಯರ್ಥಿ ಬಗ್ಗೆ ಮೊದಲು ತೀರ್ಮಾನಕ್ಕೆ ಬರುವಂತೆ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರಕ್ಕೆ ವಿಶ್ವಾಸಮತ ಯಾಚಿಸಲು ಇನ್ನು ಹತ್ತು ದಿನಗಳ ಕಾಲಾವಕಾಶವಿದೆ. ಅದಕ್ಕೂ ಮೊದಲು ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಒಂದುಗೂಡಬೇಕು ಎಂಬ ಮಾಹಿತಿ ಜನತೆಗೆ ತುರ್ತಾಗಿ ಆಗಬೇಕಿದೆ. ಆದ್ದರಿಂದ ಮೊದಲು ಕಾಂಗ್ರೆಸ್ ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕು. ಒಂದು ವೇಳೆ ಈ ಒಪ್ಪಂದಕ್ಕೆ ಕಾಂಗ್ರೆಸ್ ಒಪ್ಪದಿದ್ದರೆ ವಿಶ್ವಾಸಮತದ ವಿರುದ್ಧ ಮತ ಚಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರಿಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಗೌಡರು, ರಾಜ್ಯ ರಾಜಕೀಯದ ವಿಚಾರದಲ್ಲಿ ಕಾಂಗ್ರೆಸ್ ಕೈಗೊಳ್ಳುವ ತೀರ್ಮಾನದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪಕ್ಷಾಂತರ ಶಾಸಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಉಚಿತ ವಿದ್ಯುತ್: ಬಜೆಟ್ಟಿನಲ್ಲಿ ಸ್ಪಷ್ಟನೆ
ಸುವರ್ಣ ವಿಧಾನಸೌಧಕ್ಕೆ ಶೀಘ್ರ ಸ್ಥಳ ನಿಗದಿ: ಯಡಿಯ‌ೂರಪ್ಪ
ಜೆಸಿನಗರ ಗಲಭೆಗೆ ಸರ್ಕಾರವೇ ಹೊಣೆ
ಸಿಎಂ ಹೆಸರಲ್ಲಿ ಅರ್ಚನೆ: ಅದೇ ರಾಗ, ಅದೇ ಹಾಡು
ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಪಚುನಾವಣೆಯಲ್ಲಿ ಜೆಡಿಎಸ್ ಜತೆ ಸಖ್ಯ: ಖರ್ಗೆ
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಪಕ್ಷಾಂತರಗೊಂಡಿರುವುದರಿಂದ ಎರಡೂ ಪಕ್ಷಗಳ ನಾಯಕರು ಈಗ ಸಮಾನ ದುಃಖಿಗಳು.
ಲೋಕಸಭಾ ಚುನಾವಣೆ ಕಣದಿಂದ ಅಂಬರೀಷ್ ಹಿಂದಕ್ಕೆ
ನೈಸ್ ಕಾಮಗಾರಿಗೆ ಸುಪ್ರೀಂ ಕೋರ್ಟ್ ಅಸ್ತು
ಮನರಂಜನೆ
ಚಿತ್ರ ಸುದ್ದಿ - ಗಾಳಿಪಟದಲ್ಲಿ ಬೋಲ್ಡ್ ನಟಿಯಾಗಿ ಕಾಣಿಸಿಕೊಂಡ ಭಾವನಾ ರಾವ್ ಈಗ ಗಗನಸಖಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜು ನಿರ್ದೇಶಿಸುತ್ತಿರುವ ಮುಂದಿನ ಚಿತ್ರ 'ಗಗನಸಖಿ'ಗೆ ಭಾವನ ನಾಯಕಿ.
ಮುಂದೆ ಓದಿ|ಮತ್ತಷ್ಟು...