ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಉಚಿತ ವಿದ್ಯುತ್: ಬಜೆಟ್ಟಿನಲ್ಲಿ ಸ್ಪಷ್ಟನೆ
ಬೆಂಗಳೂರು, ಶನಿವಾರ, 12 ಜುಲೈ 2008   ( 17:12 IST )
ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದ್ದು, ಬಜೆಟ್ನಲ್ಲಿ ಘೋಷಣೆ ಮಾಡಲು ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ತಿಳಿಸಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಬಜೆಟ್ನಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೆ, ರೈತರ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ವಿದ್ಯುತ್ ಕಳ್ಳತನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪತ್ತೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿನ ವಿದ್ಯುತ್ ಅಭಾವಕ್ಕೆ ಕೇಂದ್ರ ಸರ್ಕಾರಕ್ಕೆ ನಿಯೋಗ ಕಳುಹಿಸಲಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಿದರೆ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸುವರ್ಣ ವಿಧಾನಸೌಧಕ್ಕೆ ಶೀಘ್ರ ಸ್ಥಳ ನಿಗದಿ: ಯಡಿಯ‌ೂರಪ್ಪ
ಜೆಸಿನಗರ ಗಲಭೆಗೆ ಸರ್ಕಾರವೇ ಹೊಣೆ
ಒಮ್ಮತದ ಅಭ್ಯರ್ಥಿ ಪಟ್ಟು ಸಡಿಲಿಸದ ದೇವೇಗೌಡರು
ಸಿಎಂ ಹೆಸರಲ್ಲಿ ಅರ್ಚನೆ: ಅದೇ ರಾಗ, ಅದೇ ಹಾಡು
ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣ
ತಿಳಿಗೊಂಡ ಉದ್ವಿಗ್ನ ಪರಿಸ್ಥಿತಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಪಚುನಾವಣೆಯಲ್ಲಿ ಜೆಡಿಎಸ್ ಜತೆ ಸಖ್ಯ: ಖರ್ಗೆ
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಪಕ್ಷಾಂತರಗೊಂಡಿರುವುದರಿಂದ ಎರಡೂ ಪಕ್ಷಗಳ ನಾಯಕರು ಈಗ ಸಮಾನ ದುಃಖಿಗಳು.
ಲೋಕಸಭಾ ಚುನಾವಣೆ ಕಣದಿಂದ ಅಂಬರೀಷ್ ಹಿಂದಕ್ಕೆ
ನೈಸ್ ಕಾಮಗಾರಿಗೆ ಸುಪ್ರೀಂ ಕೋರ್ಟ್ ಅಸ್ತು
ಮನರಂಜನೆ
ಚಿತ್ರ ಸುದ್ದಿ - ಗಾಳಿಪಟದಲ್ಲಿ ಬೋಲ್ಡ್ ನಟಿಯಾಗಿ ಕಾಣಿಸಿಕೊಂಡ ಭಾವನಾ ರಾವ್ ಈಗ ಗಗನಸಖಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜು ನಿರ್ದೇಶಿಸುತ್ತಿರುವ ಮುಂದಿನ ಚಿತ್ರ 'ಗಗನಸಖಿ'ಗೆ ಭಾವನ ನಾಯಕಿ.
ಮುಂದೆ ಓದಿ|ಮತ್ತಷ್ಟು...