|
| ಉಚಿತ ವಿದ್ಯುತ್: ಸಮಯಕ್ಕೊಂದು ಸುಳ್ಳು- ಖರ್ಗೆ |
| ಬೆಂಗಳೂರು, 15 ಜುಲೈ 2008 ( 19:28 IST ) | |
ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿದ್ದು ಶೀಘ್ರ ಪರಿಹಾರ ಕಾಮಗಾರಿ ಆರಂಭಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಮಳೆಬಂದ ಕಡೆ ರಸಗೊಬ್ಬರ ಪೂರೈಕೆ ಸಮರ್ಪಕವಾಗಿಲ್ಲ.
ಹೀಗಿರುವಾಗ ಸರ್ಕಾರ ಕಣ್ಣುಮುಚ್ಚಿ ಕೂರುವುದು ಸರಿಯಲ್ಲ. ರಾಜ್ಯದ 175 ತಾಲೂಕುಗಳ ಪೈಕಿ 124 ತಾಲೂಕಿಗಳಲ್ಲಿ ಮಳೆ ಕಡಿಮೆ ಇದೆ. ಅದರಲ್ಲೂ 101 ತಾಲೂಕುಗಳಲ್ಲಿ ಅತಿಕಡಿಮೆ ಅಥವಾ ಮಳೆಯೇ ಬಂದಿಲ್ಲ ಎಂಬ ಪರಿಸ್ಥಿತಿ ಇದೆ. ಆದ್ದರಿಂದ ಸರ್ಕಾರ ಶೀಘ್ರ ಕಾರ್ಯಪ್ರವೃತ್ತವಾಗಿ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಸರ್ಕಾರವನ್ನು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.
ಉಚಿತ ಸುಳ್ಳು!
ಪ್ರಣಾಳಿಕೆಯಲ್ಲಿ ಉಚಿತ ವಿದ್ಯುತ್ ಕೊಡುತ್ತೇವೆ ಎಂದವರು ಸಮಯಕ್ಕೊಂದು ಸುಳ್ಳು ಹೇಳಿ ರೈತರನ್ನು ದಾರಿ ತಪ್ಪಿಸುತ್ತಿದ್ದೀರಿ. ಈಶ್ವರಪ್ಪನವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ ಎಂದರೆ, ಮುಖ್ಯಮಂತ್ರಿಗಳು ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಶಂಕರ ಮೂರ್ತಿ ವಿದ್ಯುತ್ ಕೊಡಲು ಸಾಧ್ಯವಿಲ್ಲವೆನ್ನುತ್ತಾರೆ. ಈ ನಾಟಕ ನಿಲ್ಲಿಸಿ ಸರ್ಕಾರದ ಪರವಾದ ಸ್ಪಷ್ಟ ಹೇಳಿಕೆ ನೀಡಬೇಕೆಂದು ಇದೇ ಸಂದರ್ಭದಲ್ಲಿ ಖರ್ಗೆ ಒತ್ತಾಯಿಸಿದರು.
ಯುಪಿಎ ಸರ್ಕಾರಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಜೆಡಿಎಸ್ ಪರಮೋಚ್ಛ ನಾಯಕ ಎಚ್.ಡಿ. ದೇವೇಗೌಡರೊಂದಿಗೆ ಹೈಕಮಾಂಡ್ ಚರ್ಚೆ ನಡೆಸಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಗ್ಗೇಶ್‌ಗೆ ಟಚಿಂಗ್!
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಚಿತ್ರನಟ ಜಗ್ಗೇಶ್ ಮೇಲೇ ಕಾಂಗ್ರೆಸ್ಸಿಗರಿಗೆ ತೀರದ ಆಕ್ರೋಶ. ಇದಕ್ಕೆ ಸಾಕ್ಷಿಯೆಂಬಂತೆ ಜಗ್ಗೇಶ್ ವಿರುದ್ಧ ಪ್ರತಿಭಟನೆ ನಡೆ ಸುವುದಾಗಿ ಖರ್ಗೆ ಇದೇ ಸಂದರ್ಭದಲ್ಲಿ ಪುನರುಚ್ಚರಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. ಪ್ರೋತ್ಸಾಹಕ ಸುದ್ದಿಗಳನ್ನು ಪಡೆಯಲಿದ್ದೀರಿ. ನಿಮ್ಮ ಅದೃಷ್ಟದ ದೆಸೆಯಿಂದ ನಿಮ್ಮ ಅಭಿಲಾಶೆಗಳಿಗೆ ಸೂಕ್ತ ಪ್ರತಿಕ್ರಿಯೆ ದೊರೆಯುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ತಮ್ಮ 47 ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಹಂಚಿಕೊಂಡರು. |
| |
|
|
|
|
|
|
|