ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಜಾರಕಿಹೋಳಿ ವಜಾಕ್ಕೆ ಜೆಡಿಎಸ್ ಆಗ್ರಹ
ಬೆಂಗಳೂರು, ಶುಕ್ರವಾರ, 18 ಜುಲೈ 2008   ( 16:35 IST )
ಸಚಿವ ಬಾಲಚಂದ್ರ ಜಾರಕಿಹೋಳಿ ಅವರ ಅಧ್ಯಕ್ಷತೆಯ ಘಟಪ್ರಭಾ ಸಕ್ಕರೆ ಕಾರ್ಖಾನೆಯು 2 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡಿರುವುದರಿಂದ ತೆರಿಗೆ ಇಲಾಖೆಯು ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದೆ. ಗೋಕಾಕ್ ಜೆಎಂಎಫ್‌ಸಿ ನ್ಯಾಯಾಲದಯಲ್ಲಿ ಬೆಳಗಾವಿ ಮಾರಾಟ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ಮೇಲೆ ಮೊಕದ್ದಮೆ ಹೂಡಿದ್ದಾರೆ.

ಪ್ರಕರಣಕ್ಕೆ ರಾಜಕೀಯ ಲೇಪ ಬಂದಿದ್ದು, ಜೆಡಿಎಸ್ ಅಧ್ಯಕ್ಷ ಅರವಿಂದ ದಳವಾಯಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘಟಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸಚಿವ ಬಾಲಚಂದ್ರ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ. ತೆರಿಗೆ ನೀಡದಿರುವುದರ ಹಿಂದೆ ಅವರ ಪಾತ್ರವೂ ಇದೆ ಎಂದರು.

ಕಾರ್ಖಾನೆಯಲ್ಲಿ ದುಡಿಯುವ ನೌಕರರಿಗೆ 11 ತಿಂಗಳಿನಿಂದ ಸಂಬಳ ನೀಡಿಲ್ಲ. ಅವರ ಪಿಎಫ್, ವಿಮೆ ಪ್ರೀಮಿಯಂ ತುಂಬಿಲ್ಲ. ಸುಮಾರು 200 ಕೋಟಿ ಅವ್ಯವಹಾರ ನಡೆಸಲಾಗಿದೆ. ಆದುದರಿಂದ ಸಚಿವ ಜಾರಕಿಹೋಳಿ ರಾಜೀನಾಮೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದರು.

ಕಬ್ಬು ಸರಬರಾಜು ಮಾಡಿದ ರೈತರಿಗೆ 30 ಕೋಟಿ ರೂ. ಬಾಕಿ ನೀಡಬೇಕಾಗಿದೆ. ಆದರೂ ತಪ್ಪುಗಳನ್ನು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ಮೇಲೆ ಹೊರಿಸಿ ತಪ್ಪಿಸಿಕೊಳ್ಳಲು ಹೊಂಚು ಹಾಕುತ್ತಿದ್ದಾರೆ.

ಯಡಿಯ‌ೂರಪ್ಪನವರು ಇತ್ತೀಚೆಗೆ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ನಡೆಸಿ ರೈತರಿಗೆ ಕಿರುಕುಳ ನೀಡಬೇಡಿ ಎಂದು ಎಚ್ಚರಿಸಿದ್ದರು. ನಿಜವಾಗಿಯೂ ಅವರು ಈ ಮಾತನ್ನು ಉಳಿಸಿಕೊಳ್ಳಬೇಕಾದರೆ ಬಾಲಚಂದ್ರ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವಾರದಲ್ಲಿ ಕ್ರಮ ಜರುಗಿಸದಿದ್ದರೆ ಲೋಕಾಯುಕ್ತರಿಗೆ ಹಾಗೂ ರಾಜ್ಯಪಾಲರಿಗೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ದಳವಾಯಿ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಶ್ವಾಸಮತ: ಸಂಪೂರ್ಣ ಅಧಿಕಾರ ದೇವೇಗೌಡರದು
ಎಂ.ಪಿ. ಶಂಕರ್ ಅತ್ಯಸಂಸ್ಕಾರ ಇಂದು
ಪ್ರಧಾನಿ-ಗೌಡರ ಮಾತುಕತೆ: ಜೆಡಿಎಸ್ ನಿರ್ಧಾರ ಇಂದು
ಅಫಘಾತದಲ್ಲಿ ಇಬ್ಬರ ದುರ್ಮರಣ
ಶಾಲಾ ವಿಗ್ರಹದಿಂದ ಆಭರಣ ಕಳವು
ಲೋಕಾಯುಕ್ತರ ಬಲೆಗೆ ವಸೂಲಿ ಸಬ್‌ಇನ್ಸ್‌ಪೆಕ್ಟರ್
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...