ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅತೀ ಸೂಕ್ಷ್ಮ ನಿಲ್ದಾಣಗಳ ಪಟ್ಟಿಗೆ ಬಿಐಎ
ಬೆಂಗಳೂರು, 19 ಜುಲೈ 2008   ( 16:52 IST )
ನೂತನವಾಗಿ ಆರಂಭವಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅತಿಸೂಕ್ಷ್ಮ ವಿಮಾನ ನಿಲ್ದಾಣಗಳ ಪಟ್ಟಿಗೆ ಸೇರಿಸಲಾಗಿದೆ ! ಕೇಂದ್ರ ಗುಪ್ತದಳ ಮತ್ತು ಗೃಹ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದ್ದು, ನಕಲಿ ಪಾಸ್‌ಪೋರ್ಟ್ ಬಳಸಿ ಪ್ರಯಾಣಿಸುವುದು ಸೇರಿದಂತೆ ಮಾದಕ ವಸ್ತುಗಳ ಕಳ್ಳಸಾಗಣೆ ಈ ನಿಲ್ದಾಣದ ಮೂಲಕ ಹೆಚ್ಚಾಗಿರುವುದೇ ಈ ತೀರ್ಮಾನಕ್ಕೆ ಕಾರಣ.

ಈ ನಿಲ್ದಾಣದ ಮೂಲಕ ಗಾಂಜಾ, ಅಫೀಮಿನಂತಹ ವಸ್ತುಗಳನ್ನು ಬೆಂಗಳೂರು ಮೂಲಕ ಸಾಗಿಸಲು ಯತ್ನಿಸುತ್ತಿದ್ದವರು ಸಿಕ್ಕಿಬಿದ್ದಿದ್ದು, ಈ ಚಟುವಟಿಕೆಗೆ ಬೆಂಗಳೂರನ್ನು ಮುಖ್ಯತಾಣವನ್ನಾಗಿ ಮಾಡಿಕೊಳ್ಳುವ ಉದ್ದೇಶ ಅವರಿಗಿತ್ತು. ಇದಲ್ಲದೆ ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ಹಾರಲು ಯತ್ನಿಸುವವರ ಸಂಖ್ಯೆ ಕೂಡ ಇಲ್ಲಿ ಹೆಚ್ಚಾಗಿದೆ ಎಂದು ತಿಳಿದ ಮೇಲೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ದೇಶದಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಅತಿಸೂಕ್ಷ್ಮವೆಂದು ಈಗಾಗಲೇ ಘೋಷಿಸಲಾಗಿದೆ. ಜತೆಗೆ ಬೆಂಗಳೂರು ವಿಮಾನ ನಿಲ್ದಾಣ ಹೊಸದಾಗಿ ಸೇರ್ಪಡೆಯಾಗಿದೆ.

ಭದ್ರತೆ ಹೆಚ್ಚಳ: ಅತಿಸೂಕ್ಷ್ಮ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತದೆ. ಕೇಂದ್ರ ಕೈಗಾರಿಕಾ ಭದ್ರತಾಪಡೆಯನ್ನು ಈಗಾಗಲೇ ನಿಯೋಜಿಸಲಾಗಿದ್ದು, ಎಕೆ47 ಬಂದೂಕುಧಾರಿಗಳು ಕಾವಲು ಕಾಯಲಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುವ ಸಲುವಾಗಿ ಪ್ರತ್ಯೇಕ ವಿಚಾರಣಾ ಗೃಹವನ್ನು ಆರಂಭಿಸಲಾಗುತ್ತದೆ. ಬರುವವರು ಮತ್ತು ಹೋಗುವವರ ಸಂಪೂರ್ಣ ಮಾಹಿತಿಗಳನ್ನು ಸಂಗ್ರಹ ಮಾಡಲಾಗುತ್ತದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದ ಪೊಲೀಸರು
ದುಬಾರಿಗೊಂಡ ಬೇಕರಿ ಉತ್ಪನ್ನಗಳು
ಮತ್ತೆ ಮೀಟರ್ ಪಾರ್ಕಿಂಗ್‌ ಜಾರಿಗೆ
ಬಿಜೆಪಿ ಸೇರುವುದಿಲ್ಲ. ಉಮಾಭಾರತಿ
ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ: ಖರ್ಗೆ
ಬಜೆಟ್ಟಿನಲ್ಲಿ ಶಾಸಕರ ನಿಧಿಯೇ ಇಲ್ಲ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...