|
| ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ? |
| ಬೆಂಗಳೂರು, 19 ಜುಲೈ 2008 ( 18:29 IST ) | |
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಸ್.ಎಂ.ಕೃಷ್ಣ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಎಸ್.ಎಂ.ಕೃಷ್ಣ ರಾಜ್ಯದ ಎಲ್ಲ ಅಧಿಕಾರ ಸ್ಥರಗಳಲ್ಲೂ ನಾನು ಸೇವೆ ಸಲ್ಲಿಸಿದ್ದೇನೆ. ಶಾಸಕನಾಗಿ, ಸಭಾಧ್ಯಕ್ಷನಾಗಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿ, ಮತ್ತು ಮುಖ್ಯಮಂತ್ರಿಯಾಗಿ.. ಹೀಗೆ ಎಲ್ಲ ಅಧಿಕಾರಸ್ಥರವನ್ನು ಅಲಂಕರಿಸಿರುವ ನಾನು ನಿರಾಳವಾಗುವ ಬಯಕೆ ಇದೆ. ಎಲ್ಲ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿಭಾಯಿಸಿದ ಸಂತೃಪ್ತಿ ನನಗಿದೆ. ಆದ್ದರಿಂದ ರಾಜ್ಯ ರಾಜಕಾರಣದಿಂದ ದೂರು ಸರಿಯುವ ಇಚ್ಛೆ ಹೊಂದಿರುವುದಾಗಿ ತಿಳಿಸಿದರು.
ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ದಿಲ್ಲಿ ರಾಜಕಾರಣದತ್ತ ನನ್ನ ಚಿತ್ತ ಸರಿದಾಡುತ್ತಿದೆ. ದಿಲ್ಲಿ ರಾಜಕಾರಣದಲ್ಲೇ ಹೆಚ್ಚು ಸಕ್ರಿಯನಾಗುವ ಇಂಗಿತ ನನಗಿದೆ ಎಂದು ನೇರವಾಗಿ ಸ್ಪಷ್ಟಪಡಿಸಿದರು.
ಬಜೆಟ್ ಕುರಿತು ವ್ಯಂಗ್ಯ
ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ದೂರದೃಷ್ಟಿಯ ಕೊರತೆ ಎದ್ದುಕಾಣುತ್ತಿದೆ. ಬಜೆಟ್‌ಗೆ ಯಾವುದೆ ನೆಲೆಗಟ್ಟಿಲ್ಲ ಎಂದು ವ್ಯಂಗ್ಯ ಮಾಡಿದರು. ರೈತರಿಗೆ 10 ಹೆಚ್.ಪಿ. ವಿದ್ಯುತ್ ನೀಡುವ ಕುರಿತು ಘೋಷಣೆ ಮಾಡಿದ್ದಾರೆ. ಆದರೆ ರಾಜ್ಯದಲ್ಲಿ ದಿನವಹೀ ಬಳಕೆಗೇ ವಿದ್ಯುತ್ ಕೊರತೆ ಇದೆ ಯಾವುದೇ ಹೊಸ ಆಲೋಚನೆ ಇಲ್ಲದ ಬಜೆಟ್ ರಾಜ್ಯಕ್ಕೆ ಮಾರಕವಾಗಿ ಪರಿಣಮಿಸಲಿದೆ ಎಂದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|