ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಬೆಂಗಳೂರು, ಶನಿವಾರ, 19 ಜುಲೈ 2008   ( 20:13 IST )
ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ 48 ಮಹಡಿಗಳುಳ್ಳ ಕಟ್ಟಡ ನಿರ್ಮಿಸಲಾಗುವುದು ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.ಜಯನಗರದಲ್ಲಿ ಆರಂಭವಾಗಿರುವ ಬಿಎಂಟಿಸಿ ಬಸ್ ನಿಲ್ದಾಣ ಕಾಮಗಾರಿ ಪರೀಶೀಲನೆ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಕಟ್ಟಡವು ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿದ್ದು, ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವೆಚ್ಚವಾಗುವ ಅಂದಾಜು ಮಾಡಲಾಗಿದೆ. ನಗರದಲ್ಲಿ ಇದೇ ಮೊದಲ ಬಾರಿಗೆ ಇಂತಹ ಪ್ರಯತ್ನ ಮಾಡಲಾಗುತ್ತಿದ್ದು, ಬಸ್ ನಿಲ್ದಾಣದಲ್ಲಿರುವ ಸುಮಾರು 40 ಎಕರೆಯಷ್ಟು ಜಾಗದಲ್ಲಿ 18 ಎಕರೆ ಜಾಗವನ್ನು ಮೆಟ್ರೋ ಯೋಜನೆಗೆ ನೀಡಲಾಗುತ್ತಿದೆ. ಉಳಿದ ಎಲ್ಲ ಜಾಗವನ್ನು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳುವ ಉದ್ದೇಶವಿದೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಲಭ್ಯವಿರುವ ಜಮೀನಿನಲ್ಲಿ ಪ್ರಸ್ತುತ ಇರುವ ಬಸ್ ಡಿಪೋವನ್ನು ಶಾಂತಿನಗರಕ್ಕೆ ಸ್ಥಳಾಂತರಿಸಲಾಗುವುದು. ಇದೇ ರೀತಿ ರಾಮನಗರದಲ್ಲಿ ಸುಮಾರು ಮ‌ೂರು ಎಕರೆ ಜಾಗದಲ್ಲಿ ಎರಡು ಕಾರ್ಯಾಗಾರಗಳನ್ನೂ ಮೈಸೂರಿನಲ್ಲಿ ಏಳು ಹೊಸ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರ ಅನುಕೂಲಕ್ಕಾಗಿ ಹೆಬ್ಬಾಳ ಮತ್ತು ದೇವನಹಳ್ಳಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸುವ ಯೋಜನೆ ಇದೆ. ಶಾಂತಿ ನಗರ, ಕೋರಮಂಗಲ, ವಿಜಯನಗರ, ಕೆಂಗೇರಿ, ಬನಶಂಕರಿ, ಯಶವಂತಪುರ ಮತ್ತು ವೈಟ್‌ಫೀಲ್ಡ್‌ಗಳಲ್ಲಿ ಅತ್ಯಾಧುನಿಕ ಸೌಲಭ್ಯದ ಬಸ್‌ನಿಲ್ದಾಣ ನಿರ್ಮಿಸಲಾಗುವುದು. ಈ ನಿಲ್ದಾಣಗಳಿಗೆ ಸುಮಾರು 33 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿದೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ವಿದ್ಯುತ್ತಿಗೆ ಖೋತಾ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶ
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ಅತೀ ಸೂಕ್ಷ್ಮ ನಿಲ್ದಾಣಗಳ ಪಟ್ಟಿಗೆ ಬಿಐಎ
ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದ ಪೊಲೀಸರು
ದುಬಾರಿಗೊಂಡ ಬೇಕರಿ ಉತ್ಪನ್ನಗಳು
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...