|
| ಕುಚೇಲನ್ ವಿರುದ್ಧ ಪ್ರತಿಭಟನೆ |
| ಬೆಂಗಳೂರು, ಭಾನುವಾರ, 20 ಜುಲೈ 2008 ( 12:04 IST ) | |
ಹೊಗೇನಕಲ್ ವಿವಾದ ಸಂದರ್ಭದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿದ ಕರ್ನಾಟಕ ಮೂಲದ ಸೂಪರ್ ಸ್ಟಾರ್ ರಜನೀಕಾಂತ್ ಅವರ ಕುಚೇಲನ್ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡಬಾರದೆಂದು ಒತ್ತಾಯಿಸಿ ಕನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಹೊಗೇನಕಲ್ ವಿವಾದದ ಸಂದರ್ಭದಲ್ಲಿ ರಜನೀಕಾಂತ್ ಕರ್ನಾಟಕದ ಜನತೆಯನ್ನು ವಿಷಕ್ರಿಮಿಗಳೆಂದಿದ್ದರು. ಆ ರೀತಿ ಹಗುರವಾಗಿ ಮಾತನಾಡಿದ ಅವರ ಚಿತ್ರ ಬಿಡುಗಡೆಗೆ ಇಲ್ಲಿ ಅವಕಾಶ ನೀಡಬಾರದೆಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಚ್. ಶಿವರಾಮೇಗೌಡ ಆಗ್ರಹಿಸಿದರು.
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಗೆ ಮನವಿ ಪತ್ರ ಸಲ್ಲಿಸಿದ ಕರವೇ, ಕನ್ನಡಿಗರನ್ನು ಅವಮಾನಿಸಿರುವ ರಜನೀಕಾಂತ್ ರಾಜ್ಯಕ್ಕೆ ಬಂದು ಬಹಿರಂಗ ಕ್ಷಮೆಯಾಚಿಸಬೇಕು. ಆಗ ಮಾತ್ರ ಅವರ ಚಿತ್ರ ಬಿಡುಗಡೆಗೆ ನಮ್ಮ ಆಕ್ಷೇಪ ಇಲ್ಲ. ಇಲ್ಲವಾದರೆ ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದರು.
ಮಂಡಳಿ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|