|
| ಛತ್ತೀಸ್‌ಗಢದಿಂದ ರಾಜ್ಯಕ್ಕೆ ವಿದ್ಯುತ್ |
| ಭಾನುವಾರ, 20 ಜುಲೈ 2008 ( 13:12 IST ) | |
ಬೆಂಗಳೂರು: ರಾಜ್ಯಕ್ಕೆ 300 ಮೆಗಾವ್ಯಾಟ್ ವಿದ್ಯುತ್ ನಿಡಲು ಛತ್ತೀಸ್‌ಗಢ ಒಪ್ಪಿಗೆ ನೀಡಿದೆ. ಛತ್ತೀಸ್‌ಗಢ ಮುಖ್ಯಮಂತ್ರಿ ಡಾ.ರಮಣಸಿಂಗ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ಚರ್ಚಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ.
ರಾಜ್ಯಕ್ಕೆ ಭೇಟಿ ನೀಡಿದ ರಮಣಸಿಂಗ್ ಅವರಿಗೆ ರಾಜ್ಯ ಎದುರಿಸುತ್ತಿರುವ ಸಮಸ್ಯೆ ಕುರಿತು ಮನವರಿಕೆ ಮಾಡಲಾಯಿತು. ಅವರಲ್ಲಿ 500 ಮೆಗಾವ್ಯಾಟ್ ವಿದ್ಯುತ್ ನೀಡಬೇಕೆಂಬ ಕೋರಿಕೆ ಸಲ್ಲಿಸಲಾಯಿತು. ಕೊನೆಗೆ ಅವರು 300 ಮೆಗಾವ್ಯಾಟ್ ವಿದ್ಯುತ್ ಕೊಡಲು ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.
ಛತ್ತೀಸ್‌ಗಢದಲ್ಲಿ ಎರಡು ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಸ್ಥಾವರ ಸ್ಥಾಪಿಸುವ ಕುರಿತು ಮಾತುಕತೆ ನಡೆದಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಬಂಡವಾಳ ತೊಡಗಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ದಿನಗಳಲ್ಲಿ ಈ ಸಂಬಂಧ ಸಮಗ್ರವಾಗಿ ಚರ್ಚಿಸಿ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ದಿ ಯೋಜನೆಯಲ್ಲಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕಿಡಿಕಾರಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಕ್ಕೆ ನೀಡುತ್ತಿದ್ದ ವಿದ್ಯುತ್‌ನಲ್ಲಿ 50 ಮೆ.ವ್ಯಾ ಕಡಿತಗೊಳಿಸಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|