ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಗಣ್ಯರ ಸಂಚಾರ ಕಿರಿಕಿರಿಯಿಂದ ಸಾರ್ವಜನಿಕರಿಗೆ ಮುಕ್ತಿ
ಬೆಂಗಳೂರು, ಬುಧವಾರ, 23 ಜುಲೈ 2008   ( 14:54 IST )
ಗಣ್ಯ ವ್ಯಕ್ತಿಗಳೋ ಅಥವಾ ಸಚಿವರುಗಳೋ ರಸ್ತೆಯಲ್ಲಿ ಬರುತ್ತಾರೆಂದರೆ ಆ ರಸ್ತೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರ ಪಾಡು ಹೇಳತೀರದು. ಇದ್ದ ಸಂಚಾರವನ್ನು ಬದಲಿಸಿ ಯಾವ್ಯಾವುದೋ ಮಾರ್ಗದಲ್ಲಿ ಕಳುಹಿಸಲಾಗುತ್ತದೆ. ಅಥವಾ ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಆದರೆ ಇನ್ನು ಮುಂದೆ ಕೆಲವೇ ಕೆಲವು ಗಣ್ಯ ವ್ಯಕ್ತಿಗಳಿಗೆ ಮಾತ್ರ ಸಂಚಾರ ತೆರವುಗೊಳಿಸಿ ದಾರಿ ಮಾಡಿಕೊಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ನೀಡಿದ್ದಾರೆ.

ರಾಜ್ಯಪಾಲರು, ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಮಾಜಿ ಪ್ರಧಾನಿ ದೇವೇಗೌಡರನ್ನು ಹೊರತುಪಡಿಸಿ ರಾಜ್ಯದ ಇನ್ಯಾವುದೇ ಗಣ್ಯ ವ್ಯಕ್ತಿಗಳು ಸಂಚರಿಸುವಾಗ ಸಂಚಾರ ಸ್ಥಗಿತಗೊಳಿಸದಿರಲು ಇಲಾಖೆ ನಿರ್ಧರಿಸಿದೆ. ಇದರಿಂದ ಜನ ಸಾಮಾನ್ಯರು ಗಣ್ಯ ವ್ಯಕ್ತಿಗಳ ಕಿರಿಕಿರಿಯಿಂದ ಮುಕ್ತಿ ಪಡೆಯುತ್ತಾರೆ.

ಗಣ್ಯ ವ್ಯಕ್ತಿಗಳ ಸಂಚಾರ ಸಮಯದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿದರಿ ತಿಳಿಸಿದರು. ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಷ್ಟ್ರೀಯ ನಾಯಕರು ಹಾಗೂ ವಿದೇಶಿ ಗಣ್ಯರಿಗೆ ಸಂಚಾರ ತೆರವು ಸೌಲಭ್ಯ ಲಭ್ಯವಾಗುತ್ತದೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಉ.ಕ.ದಲ್ಲಿ ಮಳೆ: ರೈತರ ಮುಖದಲ್ಲಿ ಸಂತಸದ ಕಳೆ
ತಮಿಳರಿಂದ ಶಾಸ್ತ್ರೀಯ ಭಾಷೆಗೆ ಅಡ್ಡಿ: ಚಿಮ‌ೂ
ನೀವೇ ಕಸ ವಿಲೇವಾರಿ ಮಾಡಿ: ಬಿಬಿಎಂಪಿ ತಿರುಗೇಟು
ನನ್ನ ಸಾವಿಗೆ ಶಿಕ್ಷಕರೇ ಕಾರಣ..ಮೇಘಶ್ರೀ ಪತ್ರ
ಪ್ರತಿಪಕ್ಷಕ್ಕೆ ಮುಖ್ಯ ಸಚೇತಕ ಹುದ್ದೆಯ ಭಾಗ್ಯದ ಬಾಗಿಲು
ಎ.ಟಿ.ಬಾಬು ಕೊಲೆ: ಆರೋಪಿಗಳ ಬಂಧನ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಂ.ಎಂ.ಕೃಷ್ಣ ....
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...