|
| ಮೇಲ್ಮನೆ ಸಭಾಪತಿ ಚುನಾವಣೆ: ಸಂಪುಟದಲ್ಲಿ ನಿರ್ಧಾರ |
| ಬೆಂಗಳೂರು, ಗುರುವಾರ, 24 ಜುಲೈ 2008 ( 12:54 IST ) | |
ವಿಧಾನಪರಿಷತ್ ಸಭಾಪತಿ ಹುದ್ದೆಗೆ ಚುನಾವಣೆ ನಡೆಸುವ ಸಂಬಂಧ ಇಂದು (ಗುರುವಾರ) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಸಭಾಪತಿ ಹುದ್ದೆಗೆ ಚುನಾವಣೆ ವಿಳಂಬವಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಸಭಾನಾಯಕ ವಿ.ಎಸ್. ಆಚಾರ್ಯ ಈ ವಿಷಯ ತಿಳಿಸಿದರು. ಸಚಿವ ಸಂಪುಟದಲ್ಲಿ ಚುನಾವಣೆ ದಿನ ನಿಗದಿ ಮಾಡುವ ಕುರಿತು ಸಚಿವ ಸಂಪುಟದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಭಾಪತಿ ಚುನಾವಣೆಗೆ ದಿನ ಘೋಷಣೆ ಮಾಡದೇ ಸದನ ನಡೆಸುತ್ತಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕೆಂದು ಪ್ರತಿಪಕ್ಷಗಳು ಆಗ್ರಹಕ್ಕೆ ಸಚಿವರು ಉತ್ತರ ನೀಡಿದರೂ, ಸಮಧಾನಗೊಳ್ಳದ ಪ್ರತಿಪಕ್ಷಗಳು ಧರಣಿಗೆ ಮುಂದಾದರು. ಬಳಿಕ ವಿ.ಎಸ್. ಆಚಾರ್ಯ, ಸಚಿವ ಸಂಪುಟದಲ್ಲಿ ಚುನಾವಣೆಗೆ ದಿನ ಘೋಷಣೆ ಮಾಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಹೊಗೇನಕಲ್ ಯೋಜನೆ, ಲೋಡ್ ಶೆಡ್ಡಿಂಗ್, ಬರ ಪರಿಸ್ಥಿತಿ ಸೇರಿದಂತೆ ರಾಜ್ಯದಲ್ಲಿ ತಲೆದೋರಿರುವ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮುಂದಾಲೋಚನೆ ಇಲ್ಲದೆ ಯಾವುದೇ ಕಾರ್ಯಕ್ಕೆ ಇಳಿಯಬೇಡಿ, ನಿರಾಶೆಯಾದಿತು. ನಿಮ್ಮ ಕೀಳರಿಮೆಯಿಂದಾಗಿ ನೌಕರಿಯಲ್ಲಿ ಹೆಣಗಾಟ ಮಾಡಬೇಕಾದಿತು. |
| |
|
|
|
|
 | | pti |
| | |
| |
|
|
|
|
|
| ಚಿತ್ರ ಸುದ್ದಿ - ಆಕೆ ರಿಯಲ್ ಲೈಫ್‌ನಲ್ಲಿ ತುಂಬಾ ಮಾಡರ್ನ್ ಹುಡುಗಿ. ಆದರೆ ರೀಲಿನಲ್ಲಿ ಮಾತ್ರ ಲಂಗಧಾವಣಿ ಹಾಕುವಂತಹ ಬೆಡಗಿ. ಈ ಹಿಂದೆ ಯಾವತ್ತೂ ಲಂಗಧಾವಣಿ ಹಾಕದ ರಮ್ಯಾ ಬಾರ್ನಾ 'ನನ್ನೆದಯ ಹಾಡು' ಚಿತ್ರಕ್ಕಾಗಿ ಲಂಗಧಾವಣಿ ತೊಟ್ಟಿದ್ದಾರೆ. |
| |
|
|
|
|
|
|
|