|
| ಮಳೆಯ ಆರ್ಭಟ: ಕಟ್ಟಡ ಕುಸಿದು 2 ಸಾವು |
| ಬೆಂಗಳೂರು, ಬುಧವಾರ, 3 ಸೆಪ್ಟೆಂಬರ್ 2008 ( 12:48 IST ) | |
ಕರ್ನಾಟಕದಲ್ಲಿ ವರುಣ ತನ್ನ ಆರ್ಭಟವನ್ನು ತೀವ್ರಗೊಳಿಸಿದ್ದು, ಹುಬ್ಬಳ್ಳಿಯ ಗಣೇಶ್ ಪೇಟೆಯಲ್ಲಿನ ಕಟ್ಟಡವೊಂದು ಬುಧವಾರ ಬೆಳಿಗ್ಗೆ ಕುಸಿದು ಬಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಣೇಶ್ ಪೇಟೆಯಲ್ಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದಲ್ಲಿ ಒಟ್ಟು ಆರು ಮಂದಿ ವಾಸವಾಗಿದ್ದರು. ಭಾರೀ ಮಳೆಗೆ ಇಂದು ಬೆಳಿಗ್ಗೆ ಕಟ್ಟಡ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಮೂರು ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಮತ್ತೊಬ್ಬ ಯುವಕ ಕುಸಿದು ಬಿದ್ದ ಕಟ್ಟಡದ ಅಡಿಯಲ್ಲಿ ಸಿಲುಕಿದ್ದು, ಆತನನ್ನು ಹೊರಗೆಳೆಯಲು ಅಗ್ನಿಶಾಮಕದಳ ಮತ್ತು ಸಾರ್ವಜನಿಕರು ಹರಸಾಹಸ ಪಡುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವವನನ್ನು ಮುನ್ನಾ (41) ಎಂದು ಗುರುತಿಸಲಾಗಿದೆ ಎಂದು ಹೇಳಲಾಗುತ್ತಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|