|
| ಗಣಪ ಮಂಟಪಕ್ಕೆ ಬೆಂಕಿ: ಸ್ಥಳೀಯರಿಂದ ಬಂದ್‌ಗೆ ಕರೆ |
| ರಾಯಚೂರು, ಗುರುವಾರ, 4 ಸೆಪ್ಟೆಂಬರ್ 2008 ( 14:02 IST ) | |
ಗಣಪ ಮಂಟಪಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸ್ಥಳೀಯರು ಇಂದು(ಗುರುವಾರ) ರಾಯಚೂರು ನಗರ ಬಂದ್‌ಗೆ ಕರೆ ನೀಡಿದ್ದಾರೆ.ಗಣೇಶ ಹಬ್ಬದ ಪ್ರಯುಕ್ತ ನಿರ್ಮಿಸಲಾಗಿದ್ದ ಗಣಪನ ಮಂಟಪಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಪ್ರಕರಣದಿಂದ ಉದ್ರಿಕ್ತಗೊಂಡ ಸ್ಥಳೀಯರು ಇದನ್ನು ಖಂಡಿಸಿ ಇಂದು ಬಂದ್‌ಗೆ ಕರೆ ನೀಡಿದ್ದು, ಘಟನೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಯಿತು. ಅಲ್ಲದೆ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಕೂಡ ಬಂದ್‌ಗೆ ಬೆಂಬಲ ನೀಡಿದ್ದಾರೆ.
ಇದರಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆದಂತೆ ನಗರದೆಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|