|
| ಬಿಪಿಎಲ್ ಕಾರ್ಡು: ಸರ್ಕಾರಿ ನೌಕರರ ಮೇಲೆ ಕೇಸು |
| ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008 ( 20:07 IST ) | |
ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹರತಾಳು ಹಾಲಪ್ಪ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಭಾವಚಿತ್ರವುಳ್ಳ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಭರದಿಂದ ಸಾಗಿದೆ. ಇದರಿಂದಾಗಿ 6,00,859 ಮಂದಿ ಅನರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಬಡನತ ರೇಖೆಗಿಂತ ಕೆಳಗಿಲ್ಲದ ಕುಟುಂಬದವರನ್ನು ಕೈಬಿಟ್ಟು ಆ ಪಡಿತರ ಚೀಟಿಗಳನ್ನು ಅರ್ಹರಿಗೆ ಒದಗಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು.
ಯಶಸ್ವಿನಿ, ಗಂಗಾಕಲ್ಯಾಣ, ಸೈಕಲ್ ಮತ್ತಿತರ ಸೌಲಭ್ಯ ಪಡೆಯಲು ಶ್ರೀಮಂತರೂ ಹೆಚ್ಚು ಜಮೀನು ಉಳ್ಳವರೂ ಬಿಪಿಎಲ್ ಕಾರ್ಡ್ ಪಡೆದಿರುವುದು ಪತ್ತೆಯಾಗಿದೆ. ಪಡಿತರ ವಿತರಣೆದಾರರು, ಇಲಾಖೆ ಸಿಬ್ಬಂದಿಗಳ ಸಹಕಾರದಿಂದಲೆ ಇದು ನಡೆದಿದೆ. ಕೊಳಕು ತೊಳೆಯುವ ಕೆಲಸವನ್ನು ನಿರಂತರವಾಗಿ ಮಾಡಲಾಗುತ್ತಿದೆ. ತಿಂಗಳಾಂತ್ಯದೊಳಗೆ ಎಲ್ಲ ಜಿಲ್ಲೆಗಳಲ್ಲೂ ಪಡಿತರದಾರರ ಕುಟುಂಬ ಭಾವಚಿತ್ರ ತೆಗೆಯುವ ಕೆಲಸ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|