|
| ಮಳೆ ಆರ್ಭಟ: ಕಾಲುವೆ ದುರಸ್ತಿಗೆ ಆದೇಶ |
| ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008 ( 20:09 IST ) | |
ನಗರದಲ್ಲಿ ಮಳೆ ಆರ್ಭಟದಿಂದ ಕಾಲುವೆಗಳು ತುಂಬಿ ಹರಿಯುವಾಗ ಅಚ್ಚುಕಟ್ಟು ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಕಾಲುವೆಗಳ ಅಭಿವೃದ್ಧಿ ಕಾಮಗಾರಿಯನ್ನು ಆದಷ್ಟು ಶೀಘ್ರ ಮುಗಿಸುವಂತೆ ನಗರ ಉಸ್ತುವಾರಿ ಸಚಿವ ಆರ್. ಅಶೋಕ್ ತಾಕೀತು ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನೀರು ಸರಾಗವಾಗಿ ಹರಿಯುವ ಸಲುವಾಗಿ ನಗರದಲ್ಲಿರುವ ಕೋರಮಂಗಲ, ಚಲ್ಲಘಟ್ಟ, ಹೆಬ್ಬಾಳ ಹಾಗೂ ವೃಷಭಾವತಿ ಕಾಲುವೆಗಳ ದುರಸ್ಥಿ ಕಾಮಗಾರಿ ಕೈಗೊಂಡು ಮೂರು ವರ್ಷಗಳಾದರೂ ಮುಗಿದಿಲ್ಲ. ಇದರಿಂದಾಗಿ ಮಳೆ ಸುರಿದ ಸಂದರ್ಭದಲ್ಲಿ ಪ್ರವಾಹ ಉಂಟಾಗುತ್ತಿದೆ. ಆದ್ದರಿಂದ ಕಾಮಗಾರಿ ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ತಿಳಿಸಿದರು.
ಕಾಮಗಾರಿ ಪಡೆದ ಗುತ್ತಿಗೆದಾರರಿಂದ ಮುಚ್ಚಳಿಕೆ ಪತ್ರ ಬರೆಸಿ ಅದರಲ್ಲಿ ಕಾಮಗಾರಿಯು ಪೂರ್ಣಗೊಳ್ಳಬೇಕಿರುವ ಅವಧಿ, ಮತ್ತು ಅದರ ಅಗತ್ಯತೆ ಬಗ್ಗೆ ದಾಖಲೆ ಮಾಡಿಸಲಾಗುವುದು. ಪೂರ್ಣಗೊಂಡ ಕಾಮಗಾರಿಯಲ್ಲಿ ವ್ಯತ್ಯಾಸ ಕಂಡುಬಂದರೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಎಚ್ಚರಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|