ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಉತ್ತರ ಕನ್ನಡ ಮಳೆಗೆ ತತ್ತರ: ಒಟ್ಟು 9 ಮಂದಿ ಸಾವು
ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008   ( 12:42 IST )
ಕಳೆದ 25 ಗಂಟೆಯಿಂದೀಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಉತ್ತರ ಕರ್ನಾಟಕದಲ್ಲಿ ಏಳು ಮಂದಿ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.ಧಾರವಾಡ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೊಪ್ಪಳದಲ್ಲಿ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಗೆ ಹಾನಿಯಾಗಿದೆ.

ಹುಬ್ಬಳ್ಳಿಯಲ್ಲಿ ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ ಮ‌ೂವರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗುಲ್ಬರ್ಗಾ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಹಾಗೂ ಹೊಸಪೇಟೆ ತಾಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯಾಗಿದ್ದು, ಹಲವಾರು ಕೆರೆಗಳು ಕೋಡಿ ಬಿದ್ದಿದ್ದು ಸುಮಾರು 40ಕ್ಕೂ ಅಧಿಕ ಮನೆಗಳು ಕುಸಿದಿವೆ.

ಈ ನಡುವೆ ಬೆಂಗಳೂರಿನಲ್ಲಿ ಮಳೆಯಿಂದಾಗಿ ತತ್ತರಿಸಿದ ಕೆಲ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪನವರು ಭೇಟಿ ನೀಡಿ ಸಾಂತ್ವನ ಹೇಳಿದರು. ಅಲ್ಲದೆ, ಮಳೆಯಿಂದಾಗಿ ಆಗಿರುವ ಅನಾಹುತಕ್ಕೆ ತುರ್ತಾಗಿ ಪರಿಹಾರ ನೀಡುವಂತೆ ಅವರು ಆದೇಶ ನೀಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಮಮನಗರ ಅಭಿವೃದ್ಧಿ ಕುಂಠಿತ : ಕುಮಾರಸ್ವಾಮಿ ಆರೋಪ
ಮಳೆ ಆರ್ಭಟ: ಕಾಲುವೆ ದುರಸ್ತಿಗೆ ಆದೇಶ
ಬಿಪಿಎಲ್ ಕಾರ್ಡು: ಸರ್ಕಾರಿ ನೌಕರರ ಮೇಲೆ ಕೇಸು
ಹಾಲಿಗೆ ಪ್ರೋತ್ಸಾಹ ಧನ: ಸಚಿವ ಸಂಪುಟ ನಿರ್ಧಾರ
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಪ್ರತಿಭಟನೆಗೆ ವಿದ್ಯಾರ್ಥಿಗಳ ಬಳಕೆ: ಕಾಗೇರಿ ಖಂಡನೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ...
ಸರ್ಕಾರಕ್ಕೀಗ ನೂರರ ಸಂಭ್ರಮ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಮನರಂಜನೆ
ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.
ಮುಂದೆ ಓದಿ|ಮತ್ತಷ್ಟು...