|
| ಲಾರಿ-ಟಂಟಂ ಡಿಕ್ಕಿ: 7 ಮಂದಿ ಸಾವು |
| ಬೀದರ್, ಶುಕ್ರವಾರ, 5 ಸೆಪ್ಟೆಂಬರ್ 2008 ( 12:46 IST ) | |
ಲಾರಿ ಹಾಗೂ ಟಂಟಂ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವ ಕಲ್ಯಾಣದ ಚಿದ್ರಿ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಇಂದು(ಶುಕ್ರವಾರ) ಮುಂಜಾನೆ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಈ ದುರ್ಘಟನೆ ನಡೆದಿದ್ದು, ಗಂಭೀರ ಗಾಯಗೊಂಡವರನ್ನು ಹುಮ್ನಾಬಾದ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತಪಟ್ಟವರಲ್ಲಿ ಓರ್ವ ಬಾಲಕ, ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸೇರಿದ್ದಾರೆ.
ಸುಮಾರು 12 ಜನರು ರಾಜೇಶ್ವರದಿಂದ ಹುಮ್ನಾಬಾದ್‌ಗೆ ಟಂಟಂನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆಯಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂಬುದು ಪ್ರತ್ಯಕ್ಷದರ್ಶಿಗಳ ಆರೋಪವಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|