ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಜನತಾ ಮುಖಂಡರಿಗೆ ಪಕ್ಷಕ್ಕೆ ಆಹ್ವಾನ: ಮೆರಾಜುದ್ದೀನ್
ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008   ( 19:02 IST )
ಅನಿವಾರ್ಯ ಪರಿಸ್ಥಿತಿಯಿಂದ ಪಕ್ಷ ತೊರೆದಿರುವ ಜನತಾ ಪರಿವಾರದ ಮುಖಂಡರನ್ನು ಮತ್ತೆ ಪಕ್ಷಕ್ಕೆ ಕರೆತರಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಇಂದು(ಶುಕ್ರವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಕಾರಣಗಳಿಂದ ಜೆಡಿಎಸ್ ತೊರೆದ ನಾಯಕರೊಂದಿಗೆ ಈಗಾಗಲೇ ಮೊದಲ ಸುತ್ತಿನ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

ಈ ಸಂಬಂಧ ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ, ಡಿ.ಟಿ. ಜಯಕುಮಾರ್, ಹಿರಿಯ ಮುಖಂಡರಾದ ಮಾಹಿಮಾ ಪಟೇಲ್ ಸೇರಿದಂತೆ ಹಲವು ನಾಯಕರಲ್ಲಿ ಮಾತುಕತೆ ನಡೆಸಿದ್ದೇನೆ. ಅಲ್ಲದೆ, ಈ ಕುರಿತು ಸಕಾರಾತ್ಮಕ ಬೆಳವಣಿಗೆಗಳು ಕಂಡು ಬಂದಿವೆ ಎಂದು ವಿವರಿಸಿದರು.

ಅಲ್ಲದೆ, ಈ ಮುಖಂಡರ ಜೊತೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರುಗಳು ಮಾತುಕತೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಇದೇ ವೇಳೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ಇದೇ 8ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ಚಾಮುಂಡೇಶ್ವರಿ ದೇವಾಲಯ ನನಗೆ ವಹಿಸಿ: ಒಡೆಯರ್
ಲಾರಿ-ಟಂಟಂ ಡಿಕ್ಕಿ: 7 ಮಂದಿ ಸಾವು
ಉತ್ತರ ಕನ್ನಡ ಮಳೆಗೆ ತತ್ತರ: ಒಟ್ಟು 9 ಮಂದಿ ಸಾವು
ರಾಮಮನಗರ ಅಭಿವೃದ್ಧಿ ಕುಂಠಿತ : ಕುಮಾರಸ್ವಾಮಿ ಆರೋಪ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ...
ಸರ್ಕಾರಕ್ಕೀಗ ನೂರರ ಸಂಭ್ರಮ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಮನರಂಜನೆ
ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.
ಮುಂದೆ ಓದಿ|ಮತ್ತಷ್ಟು...