|
| ಹೈಕಮಾಂಡ್ ಬುಲಾವ್: ದೆಹಲಿಗೆ ದೌಡಾಯಿಸಿದ ಧರಂ |
| ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008 ( 12:35 IST ) | |
ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಸಮರ್ಥ ನಾಯಕನ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ. ಈ ನಿಟ್ಟಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ಹೈಕಮಾಂಡಿನಿಂದ ಬುಲಾವ್ ಬಂದಿದ್ದು, ದೆಹಲಿಗೆ ಇಂದು (ಶನಿವಾರ) ತೆರಳಿದ್ದಾರೆ.
ಈ ಸಂಬಂಧ ಇಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಜೊತೆ ಅವರು ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ಇವರ ಜೊತೆಯಲ್ಲಿ ಹಿರಿಯ ನಾಯಕರುಗಳಾದ ಡಿ.ಬಿ. ಚಂದ್ರೇಗೌಡ, ಸಿ.ಕೆ. ಜಾಫರ್ ಕೂಡ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷರು ಯಾರಾಗಬೇಕು ಎಂಬ ವಿಚಾರದಲ್ಲಿ ಇನ್ನು ಒಮ್ಮತ ನಿರ್ಧಾರ ಪ್ರಕಟಗೊಳ್ಳದಿದರೂ, ವಲಸಿಗರು ಬೇಡ ಎಂಬುದು ರಾಜ್ಯ ಹಿರಿಯ ನಾಯಕರ ಅಭಿಪ್ರಾಯ.
ಈ ನಡುವೆ ಈಗಾಗಲೇ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿರುವ ಹೈಕಮಾಂಡ್ ಸೂಕ್ತ ನಾಯಕನ ಹುಡುಕಾಟ ನಡೆಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಆರ್.ವಿ. ದೇಶಪಾಂಡೆ ಜೊತೆ ಮಾತುಕತೆ ನಡೆಸಿರುವ ಹೈಕಮಾಂಡ್, ಇದೀಗ ರಾಜ್ಯದ ಇನ್ನಿತರ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆಸಿದ ಬಳಿಕವಷ್ಟೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಅಂತಿಮ ನಿರ್ಧಾರಕ್ಕೆ ಬರಲು ನಿರ್ಧರಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ. |
| |
|
|
|
|
|
|
|