ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹಾಲಿನ ಪ್ರೋತ್ಸಾಹ ಧನ ಇಲ್ಲ: ರೇವೂ ಸ್ಪಷ್ಟನೆ
ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008   ( 12:46 IST )
ರಾಜ್ಯ ಸರ್ಕಾರ ಹೈನುಗಾರಿಕೆಗೆ ನೀಡಲು ಉದ್ದೇಶಿಸಿರುವ ಪ್ರೋತ್ಸಾಹ ಧನವನ್ನು ಖಾಸಗಿ ಹಾಲು ಉತ್ಪಾದಕರಿಗೆ ನೀಡಲಾಗುವುದಿಲ್ಲ ಎಂದು ಪಶು ಸಂಗೋಪನೆ ಸಚಿವ ರೇವೂ ನಾಯಕ್ ಬೆಳಮಗಿ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿಯವರನ್ನು ಹೊರತುಪಡಿಸಿ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಸಂಗ್ರಹವಾಗುವ ಹಾಲಿಗೆ 2 ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರೋತ್ಸಾಹ ಧನ ನೀಡುವುದರಿಂದ ಹಾಲು ಉತ್ಪಾದನೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಪ್ರಸ್ತುತ 31.7 ಲಕ್ಷ ಲೀಟರ್ ಹಾಲು ಪ್ರತಿದಿನ ಸಂಗ್ರಹವಾಗುತ್ತಿದ್ದು, 34 ಲಕ್ಷ ಲೀಟರ್‌ವರೆಗೂ 2 ರೂ. ಪ್ರೋತ್ಸಾಹಧನ ನೀಡಲು ಸಮ್ಮತಿಸಲಾಗಿದೆ ಎಂದು ಅವರು ವಿವರಿಸಿದರು.

ಈ ಸಂಬಂಧ ಘೋಷಣೆಯಾಗಿರುವ ಪ್ರೋತ್ಸಾಹ ಧನವನ್ನು ಸಹಕಾರ ಸಂಘಗಳಿಗೆ ನೀಡದೆ, ಹಾಲು ಉತ್ಪಾದಕರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಹಣದುಬ್ಬರ ಹಾಗೂ ತೈಲ ಬೆಲೆ ಏರಿಕೆಯಿಂದ ಕರ್ನಾಟಕ ಹಾಲು ಒಕ್ಕೂಟ ನಷ್ಟ ಅನುಭವಿಸುತ್ತಿದೆ. ಇದನ್ನು ಸರಿದೂಗಿಸಲು ಕೆಎಂಎಫ್ ದರ ಏರಿಕೆ ಮಾಡಬೇಕೆಂದು ಪತ್ರ ಬರೆದಿದ್ದರು. ಅಲ್ಲದೆ, ಇದರಿಂದ ಗ್ರಾಹಕರಿಗೆ ಹೊರೆಯಾಗದಂತೆ ಅವರ ಹಿತ ಕಾಪಾಡುವ ನಿಟ್ಟಿನಲ್ಲಿಯೂ ಶೀಘ್ರವೇ ಕೆಎಂಎಫ್ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹೈಕಮಾಂಡ್ ಬುಲಾವ್: ದೆಹಲಿಗೆ ದೌಡಾಯಿಸಿದ ಧರಂ
ನೂರರ ಸಂಭ್ರಮಾಚಾರಣೆ: ಸ್ವಕ್ಷೇತ್ರಕ್ಕೆ ಮುಖ್ಯಮಂತ್ರಿಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಜನತಾ ಮುಖಂಡರಿಗೆ ಪಕ್ಷಕ್ಕೆ ಆಹ್ವಾನ: ಮೆರಾಜುದ್ದೀನ್
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...