ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವರ್ಗಾವಣೆ ದಂಧೆಯಲ್ಲಿ ಸರ್ಕಾರ: ಕುಮಾರಸ್ವಾಮಿ
ಕೊಪ್ಪಳ, ಶನಿವಾರ, 6 ಸೆಪ್ಟೆಂಬರ್ 2008   ( 16:46 IST )
ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆ ಧಂದೆಯಲ್ಲಿ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ರಾಜ್ಯದ ಜನತೆ ಸಂಕಷ್ಟ ಎದುರಿಸುವಂತಾಗಿದೆ. ರೈತರ ಮೇಲೆ ಗುಂಡು ಹಾರಿಸಿದ ಸರ್ಕಾರ, ನೆರೆ, ಪ್ರವಾಹದಂತಹ ದುರಂತ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಮೇಲಾಗಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಸುವ ಮೂಲಕ ಅನ್ಯ ಪಕ್ಷಗಳ ಶಾಸಕರನ್ನು ಖರೀದಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೆಡಿಎಸ್ ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ ಎಂದು ಸರ್ಕಾರದ ಮೇಲೆ ಕಿಡಿಕಾರಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಸರ್ಕಾರ ಮರೆತಿದೆ. ಭರವಸೆಗಳು ಈಡೇರಿಸುವಲ್ಲಿ ವಿಫಲವಾಗಿರುವ ಸರ್ಕಾರ ಜನರನ್ನು ಹಾದಿ ತಪ್ಪಿಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಆಪಾದಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಚಾರಣೆಗೆ ಗೌರಿಶಂಕರ ಶ್ರಿ ಹಾಜರು
ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ?
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಕಿವುಡು ಮಕ್ಕಳ ಬಾಳಿಗೆ ಬೆಳಕು ಮ‌ೂಡಿಸುವ ಸಂಸ್ಥೆ
ನಂದಿನಿ ಹಾಲು ಲೀ.ಗೆ ಎರಡು ರೂ ಹೆಚ್ಚಳ ಸಂಭವ
32 ಆಯುರ್ವೇದಿಕ್ ಕಾಲೇಜುಗಳ ಅನುಮತಿ ರದ್ದು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...