|
| ಸೆ.12-14: ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ |
| ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008 ( 17:58 IST ) | |
ಇದೇ 12, 13, 14ರಂದು ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ನಾಲ್ಕನೇ ಬಾರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಯುತ್ತಿದ್ದು ಯಶಸ್ವಿಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.
ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್, ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಸೇರಿದಂತೆ 245 ಪ್ರತಿನಿಧಿಗಳು ಭಾಗವಹಿಸಲಿದ್ದು, 12 ರಾಷ್ಟ್ತ್ರೀಯ ಉಪಾಧ್ಯಕ್ಷರು, 7 ರಾಷ್ಟ್ರೀಯ ಕಾರ್ಯದರ್ಶಿಗಳು, 11 ಮಂದಿ ಕಾರ್ಯದರ್ಶಿಗಳು, 35 ಮಂದಿ ರಾಷ್ಟ್ರೀಯ ಪದಾಧಿಕಾರಿಗಳು, 24 ವಿಶೇಷ ಆಹ್ವಾನಿತರು, ಬಿಜೆಪಿ ಆಡಳಿತವಿರುವ 7 ರಾಜ್ಯಗಳ ಮುಖ್ಯಮಂತ್ರಿಗಳು, ಮೂವರು ಉಪಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, 36 ರಾಜ್ಯ ಘಟಕಗಳ ಅಧ್ಯಕ್ಷರು, 6 ಮಂದಿ ಕ್ಷತ್ರೀಯ ಸಂಘಟನಾ ಕಾರ್ಯದರ್ಶಿಗಳು, 29 ಮಂದಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳು, ವಿವಿಧ ರಾಜ್ಯಗಳ ಬಿಜೆಪಿಯ 17 ಮಂದಿ ವಿರೋಧ ಪಕ್ಷಗಳ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಗೌಡ ವಿವರಿಸಿದರು.
ಖಜಾನೆ ತುಂಬುತ್ತದೆ
ಸುದ್ದಿಗಾರರ ಚುಟುಕು ಪ್ರಶ್ನೆಗಳಿಗೆ ಉತ್ತರಿಸಿದ ಗೌಡ, ಸಂಪನ್ಮೂಲ ಕ್ರೋಢೀಕರಣದ ಕೊರತೆಯಿಂದ ಖಜಾನೆ ಖಾಲಿಯಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಖಜಾನೆಯನ್ನು ಹೇಗೆ ತುಂಬುವುದು ಎನ್ನುವುದು ಗೊತ್ತಿದೆಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರ ಮೌಲ್ಯ ಮಾಪನ
ರಾಷ್ಟ್ರೀಯ ಕಾರ್ಯಕಾರಿಣಿ ಮುಗಿದ ನಂತರ ಸಚಿವರ ಮೌಲ್ಯಮಾಪನ ಮಾಡಲಾಗುವುದು. ಸಾಧನೆ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಸದಾನಂದ ಗೌಡ ತಿಳಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗ ಪ್ರವೇಶಿಸಿದ ಮೇಲೆ ತಾನೇ ಚಿತ್ರರಂಗಕ್ಕೆ ನಾಯಕಿ ಅನ್ನುವವರೇ ಜಾಸ್ತಿ. ಇದೀಗ ಅಂತದ್ದೊಂದು ಸುದ್ದಿ ಸ್ಯಾಂಡಲ್ವುಡ್‌ನಿಂದ ಬಂದಿದೆ. ಇಂತಿ ನಿನ್ನ ಪ್ರೀತಿಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಾಯಕಿ ನಟಿ ಸೋನು ಈಗ 'ಗುಲಾಮ'ನಿಗೆ ನಾಯಕಿ. ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಎಲ್ಲರೂ |
| |
|
|
|
|
|
|
|