ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಲಸಿಗರಿಗೆ ಪಟ್ಟ ಬೇಡ: ಹಿರಿಯ ನಾಯಕರ ಪಟ್ಟು
ಬೆಂಗಳೂರು, ಭಾನುವಾರ, 7 ಸೆಪ್ಟೆಂಬರ್ 2008   ( 12:52 IST )
ಪ್ರದೇಶ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಬಂಧ ಕಾಂಗ್ರೆಸ್ ನಾಯಕರಲ್ಲಿ ಭುಗಿಲೆದ್ದಿದ್ದ ವಿವಾದ ಈಗ ಬಯಲಿಗೆ ಬಂದಿದೆ.ಕಾಂಗ್ರೆಸ್ಸಿಗೆ ಇತ್ತೀಚೆಗೆ ಸೇರ್ಪಡೆಯಾದವರಿಗೆ ಉನ್ನತ ಸ್ಥಾನ ನೀಡುವ ಬದಲು ಮೊದಲಿಂದಲೂ ಪ್ರಾಮಾಣಿಕವಾಗಿ ಪಕ್ಷದ ಏಳಿಗೆಗಾಗಿ ಶ್ರಮಿಸುತ್ತಿರುವವರಿಗೆ ಆದ್ಯತೆ ನೀಡುವಂತೆ ರಾಜ್ಯದ ಹಲವು ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ.

ಅಲ್ಲದೆ, ಕಾಂಗ್ರೆಸ್ ಸೇರ್ಪಡೆಗೊಂಡ ಹತ್ತು ವರ್ಷಗಳವರೆಗೆ ಪಕ್ಷದಲ್ಲಿ ಯಾವುದೇ ಉನ್ನತ ಸ್ಥಾನ ನೀಡಬಾರದೆಂದು ನಾಯಕರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿರುವ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಮತ್ತು ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಸೇರಿದಂತೆ ಹಲವು ನಾಯಕರು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಕ್ಷವನ್ನು ಒಂದುಗೂಡಿಸುವ ಹಾಗೂ ಬಿಜೆಪಿ ವಿರುದ್ಧ ಹೋರಾಟ ನಡೆಸುವಂತಹ ಸಮರ್ಥ ಹಾಗೂ ನಿಷ್ಠಾವಂತ ನಾಯಕನನ್ನು ಆಯ್ಕೆ ಮಾಡುವಂತೆ ರಾಜ್ಯದ ಹಿರಿಯ ನಾಯಕರು ಹೈಕಮಾಂಡ್‌ಗೆ ಸಲಹೆ ನೀಡಿದ್ದಾರೆ.

ಏತನ್ಮಧ್ಯೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ಆಯ್ಕೆಯನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವುದಾಗಿ ಹೈಕಮಾಂಡ್ ಮೂಲಗಳು ತಿಳಿಸಿರುವುದು ಇದೀಗ ರಾಜ್ಯ ಕಾಂಗ್ರೆಸ್ ನಾಯಕರ ಎದೆಬಡಿತ ಹೆಚ್ಚಾಗಲು ಕಾರಣವಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸೆ.12-14: ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ
30 ಲಕ್ಷ ಮೌಲ್ಯದ ನಕಲಿ ಮದ್ಯವಶ
ವರ್ಗಾವಣೆ ದಂಧೆಯಲ್ಲಿ ಸರ್ಕಾರ: ಕುಮಾರಸ್ವಾಮಿ
ವಿಚಾರಣೆಗೆ ಗೌರಿಶಂಕರ ಶ್ರಿ ಹಾಜರು
ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ?
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಗ್ರಹ ಗತಿ
ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಬಜೆಟ್ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯ‌ೂರಪ್ಪ ...
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
30 ಲಕ್ಷ ಮೌಲ್ಯದ ನಕಲಿ ಮದ್ಯವಶ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗ ಪ್ರವೇಶಿಸಿದ ಮೇಲೆ ತಾನೇ ಚಿತ್ರರಂಗಕ್ಕೆ ನಾಯಕಿ ಅನ್ನುವವರೇ ಜಾಸ್ತಿ. ಇದೀಗ ಅಂತದ್ದೊಂದು ಸುದ್ದಿ ಸ್ಯಾಂಡಲ್ವುಡ್‌ನಿಂದ ಬಂದಿದೆ. ಇಂತಿ ನಿನ್ನ ಪ್ರೀತಿಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಾಯಕಿ ನಟಿ ಸೋನು ಈಗ 'ಗುಲಾಮ'ನಿಗೆ ನಾಯಕಿ. ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಎಲ್ಲರೂ
ಮುಂದೆ ಓದಿ|ಮತ್ತಷ್ಟು...