ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರಸಗೊಬ್ಬರ ನೀತಿಯಲ್ಲಿ ತಾರತಮ್ಯ: ಯಡಿಯ‌ೂರಪ್ಪ ಆರೋಪ
ಬೆಂಗಳೂರು, ಭಾನುವಾರ, 7 ಸೆಪ್ಟೆಂಬರ್ 2008   ( 12:55 IST )
ಕೇಂದ್ರ ಸರ್ಕಾರದ ರಸಗೊಬ್ಬರ ನೀತಿಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಕೊರತೆ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರಸಗೊಬ್ಬರ ನೀತಿ ತಾರತಮ್ಯದಿಂದ ಕೂಡಿದೆ. ಎಲ್ಲಾ ರಾಜ್ಯಗಳು ನೇರವಾಗಿ ಕಾರ್ಖಾನೆಗಳಿಂದ ಖರೀದಿಸಬೇಕು ಎನ್ನುವ ಮೂಲಕ ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈ ಸಂಬಂಧ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ಕರೆದು ಪ್ರಧಾನಿಗಳ ಬಳಿ ನಿಯೋಗ ತೆರಳುತ್ತೇವೆ. ಅಗತ್ಯ ಬಿದ್ದಲ್ಲಿ ಹೋರಾಟಕ್ಕೂ ಸಿದ್ದ ಎಂದು ಅವರು ತಿಳಿಸಿದರು.

ಅಲ್ಲದೆ, ಪ್ರಕೃತಿ ವಿಕೋಪ ಪೀಡಿತ ಕರ್ನಾಟಕಕ್ಕೆ 2400 ಕೋಟಿ ರೂ. ಪರಿಹಾರ ಕೋರಿ ಇದೇ ತಿಂಗಳ 10 ರಂದು ದೆಹಲಿಗೆ ಸಚಿವರ ನಿಯೋಗವನ್ನು ಕರೆದೊಯ್ಯಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಸರ್ಕಾರದ ನೂರು ದಿನದ ಆಡಳಿತದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ನೂರು ದಿನಗಳ ಆಡಳಿತ ನನಗೆ ತೃಪ್ತಿ ತಂದಿದೆ. ನೂರು ದಿನಗಳಲ್ಲಿ ರಾಜ್ಯದಲ್ಲಿ ಆಗಿರುವ ಪ್ರಗತಿ ಕುರಿತಂತೆ ಇದೇ 9ರಂದು ಕೂಲಂಕುಷವಾಗಿ ವಿವರ ಬಹಿರಂಗ ಪಡಿಸುವುದಾಗಿ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಲಸಿಗರಿಗೆ ಪಟ್ಟ ಬೇಡ: ಹಿರಿಯ ನಾಯಕರ ಪಟ್ಟು
ಸೆ.12-14: ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ
30 ಲಕ್ಷ ಮೌಲ್ಯದ ನಕಲಿ ಮದ್ಯವಶ
ವರ್ಗಾವಣೆ ದಂಧೆಯಲ್ಲಿ ಸರ್ಕಾರ: ಕುಮಾರಸ್ವಾಮಿ
ವಿಚಾರಣೆಗೆ ಗೌರಿಶಂಕರ ಶ್ರಿ ಹಾಜರು
ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ?
ಗ್ರಹ ಗತಿ
ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಬಜೆಟ್ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯ‌ೂರಪ್ಪ ...
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
30 ಲಕ್ಷ ಮೌಲ್ಯದ ನಕಲಿ ಮದ್ಯವಶ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗ ಪ್ರವೇಶಿಸಿದ ಮೇಲೆ ತಾನೇ ಚಿತ್ರರಂಗಕ್ಕೆ ನಾಯಕಿ ಅನ್ನುವವರೇ ಜಾಸ್ತಿ. ಇದೀಗ ಅಂತದ್ದೊಂದು ಸುದ್ದಿ ಸ್ಯಾಂಡಲ್ವುಡ್‌ನಿಂದ ಬಂದಿದೆ. ಇಂತಿ ನಿನ್ನ ಪ್ರೀತಿಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಾಯಕಿ ನಟಿ ಸೋನು ಈಗ 'ಗುಲಾಮ'ನಿಗೆ ನಾಯಕಿ. ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಎಲ್ಲರೂ
ಮುಂದೆ ಓದಿ|ಮತ್ತಷ್ಟು...