ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹಾಲು ದರ ಏರಿಕೆ ಇಲ್ಲ :ಯಡಿಯ‌ೂರಪ್ಪ ಸ್ಪಷ್ಟನೆ
ಬೆಂಗಳೂರು, ಭಾನುವಾರ, 7 ಸೆಪ್ಟೆಂಬರ್ 2008   ( 17:16 IST )
ಕರ್ನಾಟಕ ಹಾಲು ಉತ್ಪಾದಕರ ಸಂಘವು ಹಾಲಿನ ಮಾರಾಟ ದರ ಹೆಚ್ಚಳದ ಪ್ರಸ್ತಾಪವನ್ನು ಮುಖ್ಯಮಂತ್ರಿಗಳು ತೀವ್ರವಾಗಿ ವಿರೋಧಿಸಿದ್ದಾರೆ. ಈ ಮೂಲಕ ಕೆಎಂಎಫ್ ಅಧ್ಯಕ್ಷ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರಿಗೆ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ.

ಈ ಕುರಿತು ಇಂದು(ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗುತ್ತದೆ. ಈ ನಿಟ್ಟಿನಲ್ಲಿ ಹಾಲಿನ ದರ ಏರಿಕೆ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಕೆಎಂಎಫ್ ಏಕಾಏಕಿ ನಷ್ಟಕ್ಕೆ ಒಳಗಾದರೆ ಹೆಚ್ಚಿನ ಸಿಬ್ಬಂದಿ ಹಾಗೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕಲಿ ಎಂದು ಸಲಹೆ ನೀಡಿದ ಅವರು, ಹಾಲು ಉತ್ಪಾದಕರಿಗೆ ನೆರವು ನೀಡುವ ಉದ್ದೇಶದಿಂದ ಹಾಲಿಗೆ ಪ್ರೋತ್ಸಾಹ ಧನ ನೀಡುತ್ತದೆ ವಿನಃ ಇದಕ್ಕಾಗಿ ಗ್ರಾಹಕರ ಮೇಲೆ ಹೊರೆ ಹಾಕುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಕೆಎಂಎಫ್ ಲೆಕ್ಕ ಪರಿಶೋಧನೆ ನಡೆಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಈ ಕುರಿತು ಪ್ರತಿಪಕ್ಷಗಳ ಸೇಡಿನ ರಾಜಕಾರಣ ಸಹಿಸಲು ಸಿದ್ಧವಿಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭುಗಿಲೆದ್ದ ಮತಾಂತರ ವಿವಾದ: 3 ಚರ್ಚ್‌ಗಳಿಗೆ ಬೀಗ
ಮಠಗಳಿಗೆ ಸರ್ಕಾರಿ ಭೂಮಿ: ಸಿದ್ದರಾಮಯ್ಯ ಆಕ್ರೋಶ
ರಸಗೊಬ್ಬರ ನೀತಿಯಲ್ಲಿ ತಾರತಮ್ಯ: ಯಡಿಯ‌ೂರಪ್ಪ ಆರೋಪ
ವಲಸಿಗರಿಗೆ ಪಟ್ಟ ಬೇಡ: ಹಿರಿಯ ನಾಯಕರ ಪಟ್ಟು
ಸೆ.12-14: ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ
30 ಲಕ್ಷ ಮೌಲ್ಯದ ನಕಲಿ ಮದ್ಯವಶ
ಗ್ರಹ ಗತಿ
ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಬಜೆಟ್ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯ‌ೂರಪ್ಪ ...
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
30 ಲಕ್ಷ ಮೌಲ್ಯದ ನಕಲಿ ಮದ್ಯವಶ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗ ಪ್ರವೇಶಿಸಿದ ಮೇಲೆ ತಾನೇ ಚಿತ್ರರಂಗಕ್ಕೆ ನಾಯಕಿ ಅನ್ನುವವರೇ ಜಾಸ್ತಿ. ಇದೀಗ ಅಂತದ್ದೊಂದು ಸುದ್ದಿ ಸ್ಯಾಂಡಲ್ವುಡ್‌ನಿಂದ ಬಂದಿದೆ. ಇಂತಿ ನಿನ್ನ ಪ್ರೀತಿಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಾಯಕಿ ನಟಿ ಸೋನು ಈಗ 'ಗುಲಾಮ'ನಿಗೆ ನಾಯಕಿ. ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಎಲ್ಲರೂ
ಮುಂದೆ ಓದಿ|ಮತ್ತಷ್ಟು...