|
| ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ |
| ಬೆಂಗಳೂರು, ಶನಿವಾರ, 11 ಅಕ್ಟೋಬರ್ 2008 ( 13:04 IST ) | |
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸುಳ್ಳು ಆಸ್ತಿ ವಿವರ ಮತ್ತು ಪ್ರಮಾಣ ಪತ್ರ ಸಲ್ಲಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ್ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರಾಜ್ಯ ಚುನಾವಣಾ ಆಯೋಗವು ಸೂಚನೆ ನೀಡಿದೆ.
ಈ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 195ರ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಕಾರವಾರ ಉಪಚುನಾವಣಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಈ ಆರೋಪ ಸಾಬೀತಾದಲ್ಲಿ ಸಚಿವ ಆನಂದ್ ಅಸ್ನೋಟಿಕರ್ ಅವರಿಗೆ ಜೈಲುವಾಸ ಶಿಕ್ಷೆಯ ಜತೆಗೆ, ಮುಂದಿನ ಆರು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಜಾರಿಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಈ ನಡುವೆ ಕಾರವಾರದ ದಿಲೀಪ್ ಎಂಬವರ ಕೊಲೆ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಪ್ರತಿಪಕ್ಷ ನಾಯಕ ವಿ.ಎಸ್. ಉಗ್ರಪ್ಪ, 2004ರಲ್ಲಿ ನಡೆದ ದಿಲೀಪ್ ಅರ್ಜುನ್ ನಾಯಕ್ ಕೊಲೆ ಪ್ರಕರಣದಲ್ಲಿ ಸಚಿವ ಆನಂದ್ ಆಸ್ನೋಟಿಕರ್ ಹಾಗೂ ಅವರ ತಾಯಿ ವಿಧಾನಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ಆಪಾದಿತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|