ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬಿಜೆಪಿ ಮಠವಾಗುತ್ತಿರುವ ರಾಮಚಂದ್ರ ಪುರ ಮಠ
ಶಿವಮೊಗ್ಗ, ಶನಿವಾರ, 11 ಅಕ್ಟೋಬರ್ 2008   ( 16:19 IST )
ರಾಮಚಂದ್ರಪುರ ಮಠಕ್ಕೆ ಗೋಕರ್ಣ ದೇವಾಲಯವನ್ನು ಹಸ್ತಾಂತರ ಮಾಡಿರುವ ಬಗ್ಗೆ ನಡೆದ ವಿವಾದದ ಬೆನ್ನಲ್ಲೆ ಇದೀಗ ರಾಮಚಂದ್ರ ಮಠ ಬಿಜೆಪಿ ಮಠವಾಗಿ ಪರಿವರ್ತಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಟೀಕಿಸಿದ್ದಾರೆ.

ನಗರದಲ್ಲಿ ಇಂದು(ಶನಿವಾರ) ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮಠ ಮಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ, ಅಭಿವೃದ್ಧಿಯತ್ತ ಚಿಂತನೆ ನಡೆಸುತ್ತಿಲ್ಲ ಎಂದು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಪನ್ಮೂಲ ಕ್ರೋಢೀಕರಣ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಆರೋಪಿಸಿದ ಅವರು, ರಾಜ್ಯದ ಖಜಾನೆ ಖಾಲಿಯಾಗಿದ್ದರೂ, ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಪ್ರಕಟಿಸುತ್ತಿದ್ದಾರೆ. ಹೀಗೆ ಮುಂದುವರಿದರೆ ರಾಜ್ಯ ದಿವಾಳಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಇದೇ ವೇಳೆ ದಂಡಾವತಿ ಯೋಜನೆ ಕುರಿತು ಪ್ರತಿಕ್ರಿಯಿಸಿದ ಬಂಗಾರಪ್ಪ, ಈ ಯೋಜನೆಯನ್ನು ಮುಂದುವರಿಸಲು ಸರ್ಕಾರ ಪ್ರಯತ್ನಿಸಿದರೆ ಸಿಂಗೂರ್ ಮಾದರಿಯಲ್ಲಿ ಹೋರಾಟ ಪ್ರಾರಂಭಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಯೋತ್ಪಾದಕ ನಂಟು: ನಾಲ್ವರು ಸ್ಥಳೀಯರ ವಿಚಾರಣೆ
ದತ್ತ ಪ್ರವೇಶ ನಿಷೇಧಕ್ಕೆ ಜಿಲ್ಲಾಡಳಿತ ನಿರ್ದೇಶನ
ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಅಧ್ಯಕ್ಷರ ಹುಡುಕಾಟದಲ್ಲಿ ಜೆಡಿಎಸ್
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಂಘ ಪರಿವಾರದ ಅಜಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಅವರಿಗೆ....
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...