ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಬೆಂಗಳೂರು, ಶನಿವಾರ, 11 ಅಕ್ಟೋಬರ್ 2008   ( 19:08 IST )
ನಕಲಿ ಮತದಾನವನ್ನು ಹಾಗೂ ನಕಲಿ ಮಾತದಾರರನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹೊಸ ಸೂತ್ರವನ್ನು ಜಾರಿಗೆ ತರಲು ಚಿಂತಿಸಿದೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಫೋಟೋವುಳ್ಳ ಮತದಾರರ ಪಟ್ಟಿಯನ್ನು ಬಳಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಮೊದಲು ಕೇರಳ, ನಂತರ ತಮಿಳುನಾಡು ಹಾಗೂ ಉತ್ತರದ ರಾಜ್ಯಗಳಿಗೆ ಜಾರಿಗೊಳಿಸಲಾಗುತ್ತದೆ ಎಂದು ಇಲ್ಲಿನ ಚುನಾವಣಾ ಆಯೋಗ ತಿಳಿಸಿದೆ.

ಈ ನಿಟ್ಟಿನಲ್ಲಿ ದೇಶಾದ್ಯಂತ ಚುನಾವಣಾ ಫೋಟೋ ಗುರುತಿನ ಚೀಟಿ ವಿತರಿಸುವ ಕಾರ್ಯವನ್ನು ಆಯೋಗ ತೀವ್ರ ಗೊಳಿಸಿದ್ದು, ಜನವರಿ ಹೊತ್ತಿಗೆ ಎಲ್ಲಾ ರಾಜ್ಯಗಳಲ್ಲಿಯೂ ಭಾವಚಿತ್ರಗಳುಳ್ಳ ಮತದಾರರ ಪಟ್ಟಿಯನ್ನು ಹೊಂದಿರುತ್ತಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ನವೆಂಬರ್ ಮೊದಲ ವಾರದ ಒಳಗಾಗಿ ಪ್ರಾಥಮಿಕ ಮತದಾರರ ಪಟ್ಟಿಗೆ ಅಧಿಸೂಚನೆ ಹೊರಡಿಸುವಂತೆ ಎಲ್ಲಾ ರಾಜ್ಯಗಳ ಚುನಾವಣಾಧಿಕಾರಿಗಳಿಗೆ ಆಯೋಗ ಹೇಳುವ ಸಾಧ್ಯತೆಯಿದೆ. ಕರ್ನಾಟಕದಲ್ಲಿನ 2 ಕೋಟಿ 65 ಲಕ್ಷ ಮತದಾರರಲ್ಲಿ 1 ಕೋಟಿ 30 ಲಕ್ಷ ಮತದಾರರು ಇನ್ನೂ ಚುನಾವಣಾ ಫೋಟೋ ಐಡೆಂಟಿಟಿ ಕಾರ್ಡ್ ಗಳನ್ನು ಪಡೆದಿಲ್ಲ. ಮುಂದಿನ 45 ದಿನಗಳಲ್ಲಿ ಕನಿಷ್ಠ ಪಕ್ಷ 1 ಕೋಟಿ ಮತದಾರರಿಗಾದರೂ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ಮ‌ೂಲಗಳು ತಿಳಿಸಿವೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶೂಟೌಟ್ ಪ್ರಕರಣ: ಗೋವರ್ಧನ ಮ‌ೂರ್ತಿ ಬಂಧನ
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಹೊರವಲಯದಲ್ಲಿ ಡಕಾಯಿತಿ: 8 ಮಂದಿ ಬಂಧನ
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ಬಿಜೆಪಿ ಮಠವಾಗುತ್ತಿರುವ ರಾಮಚಂದ್ರ ಪುರ ಮಠ
ಭಯೋತ್ಪಾದಕ ನಂಟು: ನಾಲ್ವರು ಸ್ಥಳೀಯರ ವಿಚಾರಣೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಂಘ ಪರಿವಾರದ ಅಜಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಅವರಿಗೆ....
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...