|
| ಮದ್ದೂರು: ಹಾಡಹಗಲೇ 13 ಲಕ್ಷ ದರೋಡೆ |
| ಮಂಡ್ಯ, ಸೋಮವಾರ, 13 ಅಕ್ಟೋಬರ್ 2008 ( 15:52 IST ) | |
ಮಂಡ್ಯ ಜಿಲ್ಲೆ, ಮದ್ದೂರು ತಾಲೂಕು ನಿಡಘಟ್ಟ ಗೇಟ್ ಬಳಿಯ ಪೆಟ್ರೋಲ್ ಬಂಕ್‌ಗೆ ನುಗ್ಗಿದ ದುಷ್ಕರ್ಮಿಗಳು 13 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಸೋಮವಾರ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮುಖಕ್ಕೆ ಕರ್ಚಿಫ್ ಕಟ್ಟಿಕೊಂಡಿದ್ದರು ಮತ್ತು ಅಲ್ಲಿದ್ದ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಸುಮಾರು 12 ಲಕ್ಷ 70 ಸಾವಿರದಷ್ಟು ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೀಡಾದ ಸಿಬ್ಬಂದಿಯು ಪ್ರಜ್ಞಾಶೂನ್ಯರಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು, ಪ್ರಜ್ಞೆ ಮರಳಿದ ನಂತರ ಪೆಟ್ರೊಲ್ ಬಂಕ್ ಸಿಬ್ಬಂದಿಯ ಹೇಳಿಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹಾಡಹಗಲೇ ನಡೆದಿರುವ ದರೋಡೆ ಪ್ರಕರಣದಿಂದ ಬೆಚ್ಚಿಬಿದ್ದಿರುವ ಮದ್ದೂರು ಜನತೆ, ಇದು ಪರಿಚಿತರಿಂದಲೇ ನಡೆದಿರುವ ಯೋಜಿತ ಕೃತ್ಯವಿರಬಹುದು ಎಂದು ಶಂಕಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|