|
| ಬಿಜೆಪಿ ಪಟ್ಟಿ ಪ್ರಕಟ, ಕಾಂಗ್ರೆಸ್‌ನಲ್ಲಿ ಗೊಂದಲ |
| ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008 ( 17:30 IST ) | |
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ನಲ್ಲಿ ಗೊಂದಲ ಮುಂದುವರೆದಿದೆ. ಮೂರು ಸ್ಥಾನಗಳಲ್ಲೂ ಟಿಕೆಟ್ ಆಕಾಂಕ್ಷಿಗಳು ಪೈಪೋಟಿಗಿಳಿದಿದ್ದಾರೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವುದು ಗೊಂದಲ ಹೆಚ್ಚಾಗಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್-ಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸದಿದ್ದರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಳಂಬವಾಗುತ್ತಿರುವುದು ರಾಜ್ಯ ಕಾಂಗ್ರೆಸ್ ಸ್ಥಿತಿಗೆ ಹಿಡಿದ ಕನ್ನಡಿಯಂತಾಗಿದೆ.
ಬಿಜೆಪಿ ಪಟ್ಟಿ ಪ್ರಕಟ : ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಂತಿಮಗೊಳಿಸಿದ್ದು, ಕಾಂಗ್ರೆಸ್‌ಗಿಂತ ಒಂದು ಹೆಜ್ಜೆ ಮುಂದಿಟ್ಟಿದೆ. ಕೊಡಗಿನಿಂದ ಮಾದಪ್ಪ, ಬೆಳಗಾವಿಯಿಂದ ಶಶಿಕಾಂತ್ ಅಕ್ಕಪ್ಪ ನಾಯಕ, ಧಾರವಾಡದಿಂದ ಶಿವರಾಜ್ ಸಜ್ಜನ್ ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಧಾರವಾಡ ಕ್ಷೇತ್ರದ ಬಸವರಾಜ್ ಬೊಮ್ಮಾಯಿ, ಕೊಡಗಿನಲ್ಲಿ ಅರುಣ್ ಮಾಚಯ್ಯ, ಬೆಳಗಾವಿಯಲ್ಲಿ ಸತೀಶ್ ಜಾರಕಿ ಹೋಳಿಯವರು ರಾಜೀನಾಮೆ ನೀಡಿ ವಿಧಾನಸಭೆಗೆ ಸ್ಪರ್ಧಿಸಿದ್ದ ಕಾರಣ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಚುನಾವಣೆಯಲ್ಲಿ ಮತಚಲಾಯಿಸಲಿದ್ದಾರೆ.
ತೆರವಾಗಿದ್ದ ಮೂರು ಸ್ಥಾನಗಳಲ್ಲಿ ಜೆಡಿಯು 1 ಮತ್ತು ಜೆಡಿಎಸ್ 2 ಸ್ಥಾನಗಳನ್ನು ಹೊಂದಿದ್ದವು. ಆದರೆ ಈಗ ಜೆಡಿಎಸ್ ಸ್ಪರ್ಧೆಗೆ ನಿರಾಸಕ್ತಿ ತೋರಿಸಿರುವುದು ಗಮನಸೆಳೆಯುವ ಸಂಗತಿಯಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|