|
| ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಮಾತೆ ಮಹಾದೇವಿ |
| ಬಸವಕಲ್ಯಾಣ, ಸೋಮವಾರ, 13 ಅಕ್ಟೋಬರ್ 2008 ( 17:57 IST ) | |
ಕರ್ನಾಟಕದ ಹಲವಾರು ಮಠ ಮಾನ್ಯಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಪಾರ ಮೊತ್ತದ ಹಣವನ್ನು ದಾನ ನೀಡುತ್ತಿದ್ದಾರೆ ಎಂದು ಮಾತೆ ಮಹಾದೇವಿ ಕಿಡಿಕಾರಿದ್ದಾರೆ.
ಧಾರ್ಮಿಕ ಸಂಘಸಂಸ್ಥೆಗಳಿಗೆ ಸಾರ್ವಜನಿಕ ಹಣವನ್ನು ನೀಡುವುದು ಯೋಗ್ಯವಲ್ಲ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಹೇಳಿದರು. ಹೀಗೆ ಮಠ ಗಳಿಗೆ ನೀಡಿದ ಹಣ ಜನರಸೇವೆಗೆ ಬಳಕೆಯಾದರೆ ಸಾರ್ಥಕವಾಗುತ್ತದೆ. ಆದರೆ ಮಠಾಧಿಪತಿಗಳ ಅನುಗ್ರಹ ಗಳಿಸಲು ಯಡಿಯೂರಪ್ಪ ದಾನಧರ್ಮಗಳನ್ನು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಬಸವಕಲ್ಯಾಣದಲ್ಲಿ ''ಕಲ್ಯಾಣ ಪರ್ವ'' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಬಸಸವೇಶ್ವರ ಪ್ರತಿಮೆ ನಿರ್ಮಾಣಕ್ಕಾಗಿ ಈಗಾಗಲೇ 2 ಕೋಟಿ ರು.ಗಳನ್ನು ವೆಚ್ಚ ಮಾಡಲಾಗಿದೆ. ಅದು ಪೂರ್ಣಗೊಳ್ಳಲು ಇನ್ನೂ 1 ಕೋಟಿ ರು.ಗಳ ಅಗತ್ಯವಿದೆ. ಭಕ್ತರು ಕೊಡುವ ವಂತಿಗೆ ಮೂಲಕ ಉಳಿದ ಹಣವನ್ನು ಭರಿಸಲಾಗುತ್ತದೆ ಎಂದು ನುಡಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|