ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪಕ್ಷವೇ ಮುಖ್ಯ: ಡಿಕೆಶಿ ಹೊಸರಾಗ
ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008   ( 19:12 IST )
ವೈಯಕ್ತಿಕ ಹಿತಕ್ಕಿಂತ ಪಕ್ಷದ ಸರ್ವಾಂಗೀಣ ಹಿತವೇ ಮುಖ್ಯ ಎಂದು ರಾಜ್ಯ ಕಾಂಗ್ರೆಸ್ ನೂತನ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಪಕ್ಷ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದು ನನ್ನ ಮೊದಲ ಆದ್ಯತೆ. ಮುಂಬರುವ ಚುನಾವಣೆಯ ದೃಷ್ಟಿಯಿಂದ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡುವುದು ನನ್ನ ಒಂದಂಶದ ಕಾರ್ಯಕ್ರಮ ಎಂದು ತಿಳಿಸಿದರು.

ಜೆಡಿಎಸ್ ಜೊತೆಗೆ ಮತ್ತೆ ಮೈತ್ರಿ ಸಾಧ್ಯತೆ ಕುರಿತು ಸುದ್ದಿಗಾರರಿಂದ ಎದುರಾದ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ ಅಭಿಪ್ರಾಯಪಟ್ಟಿದ್ದು, ಮೈತ್ರಿ ಕುರಿತು ಡಿ.ಕೆ. ಶಿವಕುಮಾರ್ ಅವರು ಮೃದು ಧೋರಣೆ ತಳೆದಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್ ಅಧ್ಯಕ್ಷರ ಭೇಟಿ: ಕುಮಾರಸ್ವಾಮಿ

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಚರ್ಚಿಸಲು ಶೀಘ್ರವೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಲಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತಿಳಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತೀವ್ರ ವಿರೋಧದ ನಡುವೆಯೂ ಮೈತ್ರಿಗಾಗಿ ಇತರ ಕಾಂಗ್ರೆಸ್ ನಾಯಕರು ಮೃದು ಧೋರಣೆ ತಳೆದಿದ್ದು, ಮೈತ್ರಿ ಏರ್ಪಡುವುದೇ ಇಲ್ಲವೇ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ ಮತ್ತು ಸಿದ್ಧರಾಮಯ್ಯ ಅವರ ಮುಂದಿನ ನಡೆಯ ಕುರಿತು ಜನರಲ್ಲಿ ಕುತೂಹಲ ಮೂಡಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಮಾತೆ ಮಹಾದೇವಿ
ಸತ್ತವರವಲ್ಲಿ ಮ‌ೂವರು ಮಹಿಳೆಯರು, ಒಬ್ಬ ಬಾಲಕಿ
ಬಿಜೆಪಿ ಪಟ್ಟಿ ಪ್ರಕಟ, ಕಾಂಗ್ರೆಸ್‌ನಲ್ಲಿ ಗೊಂದಲ
ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಪ್ರಕಟ
ಮದ್ದೂರು: ಹಾಡಹಗಲೇ 13 ಲಕ್ಷ ದರೋಡೆ
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ: 10 ಸಾವು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...