ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಕೆಂಚಪ್ಪಗೌಡ ಆಯ್ಕೆ
ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008   ( 19:59 IST )
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಬಿ.ಕೆಂಚಪ್ಪಗೌಡ ಅವರು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ ಕೆಂಚಪ್ಪಗೌಡ ತಂಡದ ಎಲ್ಲ ಆರು ಮಂದಿ ನಿರ್ದೇಶಕರೂ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆದ ಚುನಾವಣೆಯಲ್ಲಿ ಪ್ರಧಾನಕಾರ್ಯದರ್ಶಿಯಾಗಿ ಡಾ. ಮಹದೇವು, ಖಜಾಂಚಿಯಾಗಿ ಎನ್. ರಮೇಶ್, ಜಂಟಿ ಕಾರ್ಯದರ್ಶಿಯಾಗಿ ಆಡಿಟರ್ ನಾಗರಾಜ್, ಉಪಾಧ್ಯಕ್ಷರಾಗಿ ಕೆ. ಮಲ್ಲಯ್ಯ ಹಾಗೂ ಎಚ್.ಎಲ್. ಶಿವಣ್ಣ ಚುನಾಯಿತರಾಗಿದ್ದಾರೆ. ಶಾಸಕ ಎಂ. ಶ್ರೀನಿವಾಸ್ ನೇತೃತ್ವದಲ್ಲಿ ಸ್ಪರ್ಧಿಸಿದ್ದ 6 ಮಂದಿ ಪರಾಭವಗೊಂಡಿದ್ದಾರೆ.

ಕೆಂಚಪ್ಪಗೌಡ ತಂಡದ ಐದು ಮಂದಿ ಪದಾಧಿಕಾರಿಗಳಿಗೆ ತಲಾ 24 ಮತಗಳು ಬಂದರೆ, ಎನ್. ರಮೇಶ್ ಅವರಿಗೆ 23 ಮತಗಳು ಲಭಿಸಿದವು. ಎಂ. ಶ್ರೀನಿವಾಸ್ ಸೇರಿದಂತೆ ಎಲ್ಲ ಐದು ಮಂದಿ ನಿರ್ದೇಶಕರಿಗೂ ತಲಾ 11 ಮತಗಳು ದೊರೆತರೆ, ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅ.ದೇವೇಗೌಡರಿಗೆ 12 ಮತಗಳು ದೊರೆತವು.

ಎಲ್ಲ 35 ನಿರ್ದೇಶಕರೂ ಪದಾಧಿಕಾರಿಗಳ ಚುನಾವಣೆಯಲ್ಲಿ ಮತದಾರರಾಗಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದತ್ತ ಮಾಲಾ ಧಾರಣೆ ಆರಂಭ
ಮಹತ್ವಾಕಾಂಕ್ಷಿ ಜವಳಿ ನೀತಿ ಅನುಷ್ಠಾನಕ್ಕೆ ಚಾಲನೆ
ಪಕ್ಷವೇ ಮುಖ್ಯ: ಡಿಕೆಶಿ ಹೊಸರಾಗ
ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಮಾತೆ ಮಹಾದೇವಿ
ಸತ್ತವರವಲ್ಲಿ ಮ‌ೂವರು ಮಹಿಳೆಯರು, ಒಬ್ಬ ಬಾಲಕಿ
ಬಿಜೆಪಿ ಪಟ್ಟಿ ಪ್ರಕಟ, ಕಾಂಗ್ರೆಸ್‌ನಲ್ಲಿ ಗೊಂದಲ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...