ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮಧುಗಿರಿ ಕ್ಷೇತ್ರಕ್ಕೂ ಡಿ. 27ರಂದೇ ಉಪಚುನಾವಣೆ
ಬೆಂಗಳೂರು, ಶುಕ್ರವಾರ, 28 ನವೆಂಬರ್ 2008   ( 15:42 IST )
ಆಪರೇಷನ್ ಕಮಲ ಕ್ಷೇತ್ರಗಳ ಪೈಕಿ ಒಂದಾದ ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರಕ್ಕೂ ಡಿ. 27ರಂದೇ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಮಧುಗಿರಿಗೆ ಸಂಬಂಧಿಸಿದಂತೆ ಚುನಾವಣಾ ತಕರಾರು ಅರ್ಜಿ ಹೈಕೋರ್ಟ್‌ನಲ್ಲಿದ್ದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು. ಈ ಕುರಿತು ಹೈಕೋರ್ಟ್ ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್ ಜಾರಿ ಮಾಡಿತ್ತು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ದಿನಾಂಕವನ್ನು ನಿಗದಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಉಳಿದ ಏಳು ಕ್ಷೇತ್ರಗಳಂತೆ ಮಧುಗಿರಿಗೂ ಡಿ. 3ರಂದು ಅಧಿಸೂಚನೆ ಹೊರಬೀಳಲಿದೆ. ಡಿ. 10ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿ.11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ. 13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿರುತ್ತದೆ. ಅಂತೆಯೇ ಡಿ. 30 ಮತ ಎಣಿಕೆ ಕಾರ್ಯ ನಡೆಯಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಆಯ್ಕೆಗೊಂಡಿದ್ದ ಬಿ.ಸಿ ಗೌರಿಶಂಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಆದರೆ ಇವರ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಅವರು ಹೈಕೋರ್ಟ್ ನಲ್ಲಿ ಚುನಾವಣಾ ತಕಾರರು ಅರ್ಜಿ ಸಲ್ಲಿಸಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬೆಂಗಳೂರಿನಲ್ಲಿ ಹೈ ಅಲರ್ಟ್
ಪೋಟಾ ಕಾಯ್ದೆಗೆ ಜಾರಿಗೆ ಮುಖ್ಯಮಂತ್ರಿ ಆಗ್ರಹ
ಮುಂಬೈ ಸ್ಫೋಟ: ಕಾಂಗ್ರೆಸ್ ಖಂಡನೆ
ಲೋಕಾಯುಕ್ತ ಬಲೆಗೆ ಭ್ರಷ್ಟ ಅಧಿಕಾರಿಗಳು
ಡಿ.ಸಿ.ತಮ್ಮಣ್ಣಗೆ ಬಿಜೆಪಿಗೆ
ವರ್ತೂರು ವರ್ತನೆಯಲ್ಲಿ ಬದಲಾವಣೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗೌಡರು ಪೂಜಿಸಿದ ಖಾಕಿ ಕವರ್
ಹೋಮ ಹವನಗಳನ್ನು ಮಾಡಿಸುವಲ್ಲಿ ಇತರರಿಗಿಂತ ಒಂದೆಜ್ಜೆ ಮುಂದಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ...
ಕೋಟ್ಯಂತರ ರೂ. ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ
ಹುಬ್ಬಳ್ಳಿ ಜೆಡಿಎಸ್ ಕಾರ್ಯತಂತ್ರ
ಮನರಂಜನೆ
ಹೊಸ ಚಿತ್ರ - ಇದೊಂದು ಪಕ್ಕಾ ಲವ್ ಸ್ಟೋರಿ. ಸದಾಶಿವನಗರದ ಹುಡುಗಿ. ಶ್ರೀರಾಂಪುರ ಹುಡುಗ. ಇಬ್ಬರ ನಡುವೆ ಪ್ರೀತಿ ಶುರುವಾಗುತ್ತದೆ. ಆ ಪ್ರೀತಿ ಹೇಗಿರುತ್ತದೆ ಎಂಬುದನ್ನು ಊಹಿಸಿಕೊಳ್ಳಿ. ನಾನು ಕಥೆ ಮಾಡುವಾಗ ಕಲ್ಪನೆ
ಮುಂದೆ ಓದಿ|ಮತ್ತಷ್ಟು...