|
| ಚುನಾವಣಾ ನೀತಿ ಸಂಹಿತೆಗೆ ರಾಜ್ಯ ಸರ್ಕಾರ ಆಕ್ಷೇಪ |
| ಬೆಂಗಳೂರು:, ಶುಕ್ರವಾರ, 28 ನವೆಂಬರ್ 2008 ( 17:03 IST ) | |
ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೆ ಜಾರಿಗೊಂಡಿರುವ ನೀತಿ ಸಂಹಿತೆಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಗೊಳಿಸುವುದು ಸರಿಯಲ್ಲ ಎಂಬುದು ಸರ್ಕಾರದ ವಾದ. ಚುನಾವಣಾ ಕ್ಷೇತ್ರಗಳಿಗೆ ಸಂಬಂಧಿಸಿದ ತಾಲೂಕಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.
ಮರು ಚುನಾವಣೆ ನಡೆಯುತ್ತಿರುವುದರಿಂದ ಹೊಸ ಯೋಜನೆಗಳಿಗೆ ಮಾತ್ರವಲ್ಲದೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ತಡೆಯಾಗಿದೆ. ಅಲ್ಲದೆ, ಇದರಿಂದಾಗಿ ಅಭಿವೃದ್ಧಿ ಕಾರ್ಯಕ್ರಮದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂಬುದು ರಾಜ್ಯ ಸರ್ಕಾರದ ಅಭಿಪ್ರಾಯ.
ಈ ಹಿಂದೆ ಚಾಮುಂಡೇಶ್ವರಿ ಚುನಾವಣೆಯ ಸಂದರ್ಭದಲ್ಲಿ ನಂಜನಗೂಡು ಹಾಗೂ ಮೈಸೂರು ಗ್ರಾಮಾಂತರ ತಾಲೂಕಿಗೆ ಮಾತ್ರ ನೀತಿ ಸಂಹಿತೆ ಜಾರಿಗೊಳಿಸಲಾಗಿತ್ತು. ಅದರಂತೆ ಈ ಬಾರಿಯೂ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಬೇಕೆಂದು ಸರ್ಕಾರ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಇದೊಂದು ಪಕ್ಕಾ ಲವ್ ಸ್ಟೋರಿ. ಸದಾಶಿವನಗರದ ಹುಡುಗಿ. ಶ್ರೀರಾಂಪುರ ಹುಡುಗ. ಇಬ್ಬರ ನಡುವೆ ಪ್ರೀತಿ ಶುರುವಾಗುತ್ತದೆ. ಆ ಪ್ರೀತಿ ಹೇಗಿರುತ್ತದೆ ಎಂಬುದನ್ನು ಊಹಿಸಿಕೊಳ್ಳಿ. ನಾನು ಕಥೆ ಮಾಡುವಾಗ ಕಲ್ಪನೆ |
| |
|
|
|
|
|
|
|