ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸುರಕ್ಷತಾ ಕ್ರಮ: ಇಂದು ಸರ್ವಪಕ್ಷ ಸಭೆ
ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008   ( 16:14 IST )
ಮುಂಬೈ ಉಗ್ರರ ದಾಳಿಯಿಂದ ರಾಜ್ಯ ಎಚ್ಚೆತ್ತುಕೊಂಡಂತಿದೆ. ರಾಜ್ಯದಲ್ಲಿ ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಂಜೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ರಾಜ್ಯದಲ್ಲಿ ಸಂಭವನೀಯ ಉಗ್ರರ ದಾಳಿ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮುಂತಾದ ಮಹಾ ನಗರಗಳಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಚರ್ಚೆ ನಡೆಯಲಿದೆ. ಮಂಗಳೂರು ಸೇರಿದಂತೆ ಕರಾವಳಿ ಪ್ರದೇಶಗಳ ಮೂಲಕ ಉಗ್ರರು ಪ್ರವೇಶಿಸುವುದನ್ನು ತಡೆಟಗಟ್ಟುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮಾದರಿಯಲ್ಲಿ ರಾಜ್ಯದಲ್ಲಿಯೂ ಉಗ್ರರ ನಿಗ್ರಹಕ್ಕೆ ಶಸ್ತ್ರಸಜ್ಜಿತ ದಳ ರೂಪಿಸುವ ಸಂಬಂಧ ಸಭೆ ನಿರ್ಣಯಕ್ಕೆ ಬರುವ ಸಂಭವವಿದೆ. ದುರ್ಘಟನೆ ಸಂಭವಿಸಿದಾಗ ಕೇಂದ್ರದಿಂದ ಪಡೆ ತರಿಸುವ ಬದಲು ರಾಜ್ಯದಲ್ಲಿಯೇ ಅಂತಹ ಪಡೆಯೊಂದನ್ನು ರೂಪಿಸಬೇಕು ಎನ್ನುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ಗೃಹ ಸಚಿವ ವಿ.ಎಸ್.ಆಚಾರ್ಯ ಸೇರಿದಂತೆ ಸಂಪುಟದ ಹಿರಿಯ ಸಚಿವರು ಹಾಗೂ ಉನ್ನತ ಪೊಲಿಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಧಾನಸೌಧ ದಳ್ಳಾಳಿಗಳ ತಾಣ: ಕೃಷ್ಣ ಆರೋಪ
ರಾಜಕಾರಣಿಗಳಿಗೆ ಪ್ರವೇಶವಿಲ್ಲ: ಉನ್ನಿಕೃಷ್ಣನ್ ತಂದೆ
ಮುಂಬೈ ಉಗ್ರ ಬೆಂಗಳೂರಿಗೆ
'ಪತ್ರಿಕೆಗಳು ಮೌಲ್ಯವನ್ನು ಅಳವಡಿಸಬೇಕು'
ಏಕತೆ ಪ್ರದರ್ಶನಕ್ಕೆ ದೇವೇಗೌಡ ಕರೆ
ಸಿಎಂಗೆ ರೈತರ ಪರ ನಿರ್ಲಕ್ಷ್ಯ: ರೈತ ಸಂಘ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...