ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಆಗ್ರಹ
ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008   ( 17:37 IST )
ಮುಂಬೈ ಉಗ್ರರ ದಾಳಿ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಹೊಣೆಯನ್ನು ಸಾಮೂಹಿಕವಾಗಿ ಹೊರಬೇಕು. ಇದಕ್ಕಾಗಿ ಕೇಂದ್ರ ಗೃಹಮಂತ್ರಿಗಳು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಶಿವರಾಜ್ ಪಾಟೀಲ್ ತಲೆದಂಡದಿಂದ ಏನೂ ಆಗುವುದಿಲ್ಲ. ಈ ಘಟನೆಗೆ ಒಬ್ಬರನ್ನು ಗುರಿಪಡಿಸುವ ಬದಲು ಸಂಘಟಿತ ಹೋರಾಟ ಅಗತ್ಯ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶೀಘ್ರವೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಆಂತರಿಕ ಭದ್ರತೆ ಹಾಗೂ ಉಗ್ರರ ನಿಗ್ರಹ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಮುಂಬೈನಂತಹ ಘಟನೆ ರಾಜ್ಯದಲ್ಲಿ ಮರುಕಳಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಿದ ಅವರು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಭಯೋತ್ಪಾದನೆ ಹತ್ತಿಕ್ಕಲು ರಾಜ್ಯ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಉತ್ತರಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಡಿ.5: ಹಾಲು ಉತ್ಪಾದಕರ ರ‌್ಯಾಲಿ
ಸುರಕ್ಷತಾ ಕ್ರಮ: ಇಂದು ಸರ್ವಪಕ್ಷ ಸಭೆ
ವಿಧಾನಸೌಧ ದಳ್ಳಾಳಿಗಳ ತಾಣ: ಕೃಷ್ಣ ಆರೋಪ
ರಾಜಕಾರಣಿಗಳಿಗೆ ಪ್ರವೇಶವಿಲ್ಲ: ಉನ್ನಿಕೃಷ್ಣನ್ ತಂದೆ
ಮುಂಬೈ ಉಗ್ರ ಬೆಂಗಳೂರಿಗೆ
'ಪತ್ರಿಕೆಗಳು ಮೌಲ್ಯವನ್ನು ಅಳವಡಿಸಬೇಕು'
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...